ಸೌಮ್ಯ ಕೊಲೆ ಪ್ರಕರಣ | ಕೊಲೆಯಾಗುವ ದಿನ ಪ್ರಿಯಕರನಿಗಾಗಿ ತಂದಿದ್ದಳು ಉಡುಗೊರೆ – ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು
ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ – ಸೌಮ್ಯ ಸಹೋದರಿ ಸುಮ
ಪ್ರಿಯಕರನಿಗಾಗಿ ಪ್ರೀತಿಯಿಂದ ಉಡುಗೊರೆ ತೆಗೆದುಕೊಂಡು ಬಂದಿದ್ದ ಯುವತಿ ಪ್ರಿಯಕರನಿಂದಲೇ ಕ್ರೂರವಾಗಿ ಹತ್ಯೆಯಾಗಿದ್ದಾಳೆ ಹೌದು
ಬದುಕಿನ ಬಗ್ಗೆ ಬಣ್ಣಬಣ್ಣದ ಕನಸುಗಳನ್ನು ಕಟ್ಟಿಕೊಂಡಿದ್ದ ಸೌಮ್ಯ ತನ್ನನ್ನು ಕೊಲೆಗೈಯುವ ದಿನವೂ ಆತನಿಗೆ ಬ್ಲೂಟೂತ್ ಹೆಡ್ ಫೋನ್ ನ್ನು ಉಡುಗೊರೆಯಾಗಿ ತಂದಿದ್ದಾಳೆ.
ಸೌಮ್ಯಾ ಮತ್ತು ಸೃಜನ್ ಕಳೆದ ಎರಡೂವರೆ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಮಧ್ಯೆ ತನ್ನನ್ನು ಮದುವೆಯಾಗುವಂತೆ ಸೌಮ್ಯಾ ಒತ್ತಾಯಿಸುತ್ತಿದ್ದಳು. ಇದರಿಂದ ಬೇಸತ್ತ ಸೃಜನ್ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಸೃಜನ್ ಮೃತದೇಹವನ್ನು ಶಿವಮೊಗ್ಗದ ಮುಂಬಾಳು ಗ್ರಾಮದ ಬಳಿ ಹೂತಿಟ್ಟಿದ್ದ ಘಟನೆ ನಡೆದಿತ್ತು.
ಸೃಜನ್ ನ್ನು ತುಂಬಾ ಗಾಢವಾಗಿ ಪ್ರೀತಿಸುತಿದ್ದ ಸೌಮ್ಯ ತನ್ನ ಪ್ರಿಯಕರ ಬೈಕ್ ನಲ್ಲಿ ಓಡಾಡುವಾಗ ತೊಂದರೆಯಾಗದಿರಲೆಂದು ಆತನಿಗೆ 5 ಸಾವಿರ ರೂ ಮೌಲ್ಯದ ಬ್ಲೂಟೂತ್ ಹೆಡ್ ಫೋನ್ ನ್ನು ಉಡುಗೊರೆಯಾಗಿ ತಂದಿದ್ದಳು ಆದರೆ ಅದೇ ದಿನ ಆತನ ಪ್ರಿಯಕರ ಅವಳ ಕುತ್ತಿಗೆಯ ಮೇಲೆ ಕಾಲಿಟ್ಟು ಕ್ರೂರವಾಗಿ ಹತ್ಯೆಗೈದಿದ್ದಾನೆ.
ಘಟನೆ ಬಗ್ಗೆ ಎಸ್ ಪಿ ಮಿಥುನ್ ಕುಮಾರ್ ಹೇಳಿದ್ದೇನು..??
ಪೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಸುಜನ್ ಕೊಲೆ ಮಾಡಿರೋದಾಗಿ ಒಪ್ಪಿಕೊಂಡಿದ್ದಾನೆ. ಮೂರು ವರ್ಷದಿಂದ ಇಬ್ಬರ ನಡುವೆ ಪರಿಚಯ ವಾಗಿತ್ತು. ಸ್ನೇಹ ಸಲುಗೆಯಿಂದ ಪ್ರೀತಿ ಬೆಳೆದಿತ್ತು. ಮದುವೆ ಆಗುವಂತೆ ಯುವತಿ ಒತ್ತಾಯಿಸುತ್ತಿದ್ದಳು ಅಂತ ಯುವಕ ಹೇಳಿದ್ದಾನೆ ಎಂದಿದ್ದಾರೆ.
ಇತ್ತೀಚೆಗೆ ಸಾಗರಕ್ಕೆ ವರ್ಗಾವಣೆ ಗೊಂಡಿದ್ದ ಸುಜನ್ ನನ್ನ ನೋಡಲು ಕೊಪ್ಪದಿಂದ ಸಾಗರ,ತೀರ್ಥಹಳ್ಳಿ ಗೆ ಯುವತಿ ಬಂದು ಹೋಗುತ್ತಿದ್ದಳು. ಸಾಗರಕ್ಕೂ ಯುವತಿ ಬಂದು ಹೋಗುತ್ತಿದ್ದಳು. ಸೃಜನ್ ಗೆ ಬೇರೆ ಹುಡುಗಿ ಜೊತೆ ಸಲುಗೆ ಬೆಳೆದಿತ್ತು. ಈ ವಿಚಾರದಿಂದ ಯುವತಿಗೆ ಕೋಪ ಬಂದಿತ್ತು ಎಂದು ಘಟನೆಯ ಬಗ್ಗೆ ವಿವರಿಸಿದ್ದಾರೆ.
ಜುಲೈ 2ಕ್ಕೆ ಸಾಗರಕ್ಕೆ ಯುವತಿ ಬಂದಿದ್ದಳು. ಸಾಗರದಿಂದ ಬೈಕ್ ನಲ್ಲಿ ಕರೆದುಕೊಂಡು ಹೋಗಿದ್ದಾನೆ.ರಿಪ್ಪನಪೇಟೆ ಬಳಿ ಯುವತಿಯನ್ನು ಇಳಿಸಿ ನಿಮ್ಮ ಮನೆಗೆ ಹೋಗು ಎಂದಿದ್ದ. ದಾರಿ ಉದ್ದಕ್ಕೂ ಜಗಳ ಮಾಡಿಕೊಂಡು ಬಂದಿದ್ದಾರೆ. ಆ ವೇಳೆ ಯುವಕ ಕೋಪದಿಂದ ಯುವತಿಗೆ ಹೊಡೆದಿದ್ದಾನೆ.
ಯುವತಿ ಕೆಳಗೆ ಬಿದ್ದಿದ್ದಾಳೆ ನಂತರ ಕಾಲಿನಿಂದ ಕುತ್ತಿಗೆಗೆ ತುಳಿದಿದ್ದಾನೆ. ಯುವತಿ ಸಾವನ್ನಪ್ಪಿದ ನಂತರ ಸಾಗರಕ್ಕೆ ಬಂದು ಕಾರು ತಂದಿದ್ದಾನೆ. ಕಾರಲ್ಲಿ ಮೃತದೇಹ ತಂದು ಜಲಜೀವನ್ ಕಾಮಗಾರಿಯ ಕಾಲುವೆಯಲ್ಲಿ ಹೂತಿಟ್ಟಿದ್ದಾನೆ ಎಂದು ಘಟನೆಯ ಕುರಿತು ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ – ಸೌಮ್ಯ ಸಹೋದರಿ ಸುಮ
ಮೃತ ಸೌಮ್ಯ ಸಹೋದರಿ ಮಾದ್ಯಮದವರೊಂದಿಗೆ ಮಾತನಾಡಿ ನಮ್ಮ ಅಕ್ಕಳನ್ನು ನಾವು ಮಗುವಂತೆ ಸಾಕಿದ್ದೆವು ಅವಳನ್ನು ಅನ್ಯಾಯವಾಗಿ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಹೇಳಿದ್ದಾರೆ.
ನಮ್ಮ ತಾಯಿ ಭಾರತ್ ಫೈನಾನ್ಸ್ ನಲ್ಲಿ ಲೋನ್ ಪಡೆದಿದ್ದಾಗ ಅದರಲ್ಲಿದ್ದ ನಂಬರ್ ಪಡೆದುಕೊಂಡು ನನ್ನ ಅಕ್ಕಳ ಮನಸ್ಸನ್ನು ಕೆಡಿಸಿ ಅವಳನ್ನು ಪ್ರೀತಿಸುವ ನಾಟಕವಾಡಿ ಅವಳ ಖಾಸಗಿ ವೀಡಿಯೋಗಳನ್ನು ತರಿಸಿಕೊಂಡು ಬ್ಲಾಕ್ ಮೇಲ್ ಮಾಡಿ ಕೊನೆಗೆ ನೀವು ಕೀಳುಜಾತಿಯವರು ಎಂದು ಮದುವೆಯಾಗಲು ನಿರಾಕರಿಸಿ ಈಗ ಅವಳನ್ನು ಹತ್ಯೆ ಮಾಡಿದ್ದಾನೆ ಅವನಿಗೆ ಗಲ್ಲು ಶಿಕ್ಷೆ ವಿಧಿಸ ಬೇಕು ಎಂದು ಹೇಳಿದ್ದಾರೆ.
ಘಟನೆ ವಿವರ:
ತೀರ್ಥಹಳ್ಳಿಯಲ್ಲಿ ಫೈನಾನ್ಸ್‌ನಲ್ಲಿ ಕೆಲಸ ಮಾಡುತ್ತಿರುವ ಸೃಜನ್ ಆಗಾಗ ಕೊಪ್ಪಗೆ ಹಣ ವಸೂಲಿಗೆಂದು ಹೋಗುತ್ತಿದ್ದ. ಈ ವೇಳೆ ನರ್ಸಿಂಗ್ ಓದುತ್ತಿದ್ದ ಸೌಮ್ಯಾಳ ಪರಿಚಯವಾಗಿದೆ. ಈ ಪರಿಚಯ ಕ್ರಮೇಣ ಪ್ರೀತಿಗೆ ತಿರುಗಿದೆ. ಆದರೆ ಇಬ್ಬರದ್ದು ಬೇರೆ ಬೇರೆ ಸಮುದಾಯವಾಗಿದ್ದರಿಂದ ಸೃಜನ್ ಮನೆಯಲ್ಲಿ ಮದುವೆಗೆ ನಿರಾಕರಿಸಿದ್ದಾರೆ.
ಇತ್ತ ಸೌಮ್ಯ ತಮ್ಮ ಪೋಷಕರ ಬಳಿ ತೀರ್ಥಹಳ್ಳಿಗೆ ಹೋಗುತ್ತೇನೆ ಎಂದು ಜುಲೈ 2 ರಂದು ಹೊರಟಿದ್ದಾಳೆ. ಅಂತೆಯೇ ತೀರ್ಥಹಳ್ಳಿಗೆ ಬಂದ ಸೌಮ್ಯಾ ತನ್ನ ಪ್ರಿಯತಮನನ್ನು ಭೇಟಿಯಾಗಿ ಮನೆಗೆ ಕರೆದುಕೊಂಡು ಹೋಗುವಂತೆ ಒತ್ತಾಯಿಸಿದ್ದಾಳೆ. ಈ ವೇಳೆ ಸೃಜನ್, ನಮ್ಮ ಮನೆಗೆ ಈಗ ಬರಬೇಡ, ನಿಮ್ಮ ಮನೆಗೆ ವಾಪಸ್ ಹೋಗು ಎಂದು ಮನವೊಲಿಸುವ ಪ್ರಯತ್ನ ಮಾಡಿದ್ದಾನೆ.
ಆದರೆ ಸೃಜನ್ ಮಾತನ್ನು ಕೇಳದ ಸೌಮ್ಯಾ ಮತ್ತೆ ಆತನನ್ನು ಪೀಡಿಸಿದ್ದಾಳೆ. ಹೀಗಾಗಿ ಸೃಜನ್ ಆಕೆಯನ್ನು ಸಮಾಧಾನಪಡಿಸಲೆಂದು ತೀರ್ಥಹಳ್ಳಿಯಿಂದ ಹೆದ್ದಾರಿಪುರಕ್ಕೆ ಕರೆದುಕೊಂಡು ಬಂದಿದ್ದಾನೆ. ತನ್ನನ್ನು ಸೃಜನ್ ಮದುವೆ ಆಗಲ್ಲವೆಂದು ಅನುಮಾನ ವ್ಯಕ್ತಪಡಿಸಿದ್ದಾಳೆ. ಆಗ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರೊಚ್ಚಿಗೆದ್ದ ಸೃಜನ್, ಸೌಮ್ಯ ಮೇಲೆ ಹಲ್ಲೆ ಮಾಡಿದ್ದಾನೆ. ಬಳಿಕ ಕತ್ತು ಹಿಸುಕಿದ್ದು, ಪರಿಣಾಮ ಆಕೆ ಸ್ಥಳದಲ್ಲೇ ಅಸುನೀಗಿದ್ದಾಳೆ. ಇನ್ನು ಸೌಮ್ಯಾ ಮೃತಪಟ್ಟಿರುವುದನ್ನು ಖಚಿತಪಡಿಸಿಕೊಂಡ ಸೃಜನ್ ಗಾಬರಿಯಾಗಿದ್ದಾನೆ. ಅಲ್ಲದೇ ಕೂಡಲೇ ಶವವನ್ನು ಆನಂದಪುರ ಸಮೀಪದ ಮುಂಬಾಳು ಬಳಿ ಹೂತಿಟ್ಟಿದ್ದಾನೆ.
ಇತ್ತ ತೀರ್ಥಹಳ್ಳಿಗೆ ಹೋದ ಸೌಮ್ಯಾ ವಾಪಸ್ ಬರದೇ ಇರುವುದರಿಂದ ಆಕೆಯ ಪೋಷಕರು ಆತಂಕಗೊಂಡು ಕೊಪ್ಪ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ಯುವಕನನ್ನು ಹುಡುಕಿಕೊಂಡು ಸಾಗರಕ್ಕೆ ಬಂದಿದ್ದಾರೆ. ಈ ವೇಳೆ ಸೃಜನ್ ಬಣ್ಣ ಬಯಲಾಗಿದೆ.