ಆನಂದಪುರದ ಸಮೀಪ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತ | ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಸಂಚಾರ ಸ್ಥಗಿತ
ಸಾಗರ ತಾಲೂಕಿನ ಆನಂದಪುರ ಸುತ್ತಮುತ್ತ ಮಳೆಯ ಆರ್ಭಟ ಹೆಚ್ಚಾಗಿದ್ದು ಗುಡುಗು ಸಹಿತ ಭಾರಿ ಗಾಳಿ ಮಳೆಯಾಗಿದ್ದು ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತವಾಗಿದೆ.
ಆನಂದಪುರ ಸಮೀಪದ ಮುಂಬಾಳು ಗ್ರಾಮದಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ವಾಹನ ಸಂಚಾರ ಅಸ್ಥವ್ಯಸ್ತಗೊಂಡಿದೆ.ಒಂದೂವರೆ ತಾಸಿಗೂ ಹೆಚ್ಚು ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಎರಡೂ ಬದಿ ನೂರಾರು ವಾಹನಗಳು ಸಾಲುಗಟ್ಟಿ ನಿಂತವು
ಗಂಟೆಗಟ್ಟಲೆ ಕಾಲ ಟ್ರಾಫಿಕ್ ಜಾಮ್ ಹಿನ್ನಲೆಯಲ್ಲಿ ಸಾರ್ವಜನಿಕರು ಹಾಗೂ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿದ್ದು ಬಿರುಸಿನ ಮಳೆಯ ನಡುವೆಯೂ ಮೆಸ್ಕಾಂ ಸಿಬ್ಬಂದಿಗಳು, ಅರಣ್ಯ ಇಲಾಖಾ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ.
ಆಗುಂಬೆ ಘಾಟ್ ನಲ್ಲಿ ಮರ ಬಿದ್ದು ಸಂಚಾರ ಸ್ಥಗಿತ
ಶಿವಮೊಗ್ಗ ಮತ್ತು ಕರಾವಳಿ ಉಡುಪಿ ಜಿಲ್ಲೆ ಸಂಪರ್ಕಿಸುವ ಆಗುಂಬೆ ಘಾಟಿ ರಸ್ತೆಯಲ್ಲಿ ಮರ ಬಿದ್ದು ಸಂಚಾರ ಸ್ಥಗಿತಗೊಂಡಿದೆ.
ಘಾಟ್‌ನ ಮೂರನೇ ತಿರುವಿನಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಕಾರಣ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಮಾಹಿತಿ ತಿಳಿದ ಕೂಡಲೇ ಪೊಲೀಸರು ಮತ್ತು ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.
ರಸ್ತೆಗೆ ಅಡ್ಡಲಾಗಿ ಬಿದ್ದ ಮರ ತೆರವುಗೊಳಿಸುವ ಕಾರ್ಯಾಚರಣೆ ಭರದಿಂದ ಸಾಗಿದ್ದು, ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಸಂಚಾರ ದಟ್ಟಣೆ ಉಂಟಾಗಿದೆ.