POSTMANNEWS

ನೈಜ ಸುದ್ದಿ ನೇರ ಬಿತ್ತರ..

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಹೊಸನಗರದಲ್ಲಿ ವಿವಿಧ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಹೊಸನಗರ : ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ರಸ್ತೆತಡೆ ಹಾಗೂ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಪಟ್ಟಣದ ಬಸ್ ನಿಲ್ದಾಣದಲ್ಲಿ ಬಜರಂಗ ದಳ, ಹಿಂದೂ ಕಾರ್ಯಕರ್ತರು ಹಿಂದೂಗಳ ಮೇಲಿನ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಿದರು. ಬಳಿಕ ರಸ್ತೆ ತಡೆ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದರು.

ನಂತರ ಹೊಸನಗರ ತಹಶೀಲ್ದಾರ್ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಅಸಂಖ್ಯಾತ ಹಿಂದೂ ಗಳ ರಕ್ಷಣೆ ಕೋರಿ ಮನವಿ ಪತ್ರ ಸಲ್ಲಿಸಿದರು..

ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡ ಎನ್ ಆರ್ ದೇವಾನಂದ್ ಸೇರಿದಂತೆ ಇನ್ನಿತರರಿದ್ದರು.

About The Author

Leave a Reply

Your email address will not be published. Required fields are marked *