POSTMANNEWS

ನೈಜ ಸುದ್ದಿ ನೇರ ಬಿತ್ತರ..

ಶಿಮೂಲ್ ಚುನಾವಣೆ ಫಲಿತಾಂಶ ಪ್ರಕಟ

ಶಿಮೂಲ್ ಚುನಾವಣೆ ಫಲಿತಾಂಶ ಪ್ರಕಟ

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ.ಇಂದು ಬೆಳಗ್ಗೆ ಮತದಾನ ನಡೆದಿತ್ತು. ಸಂಜೆ ವೇಳೆಗೆ ಮತ ಎಣಿಕೆ ಪೂರ್ಣಗೊಂಡು ಫಲಿತಾಂಶ ಪ್ರಕಟಿಸಲಾಗಿದೆ.

ಶಿವಮೊಗ್ಗ ತಹಶೀಲ್ದಾರ್‌ ಬಿ.ಎನ್.ಗಿರೀಶ್‌ ಅವರು ರಿಟರ್ನಿಂಗ್‌ ಆಫೀಸರ್‌ ಆಗಿದ್ದರು.12 ಸ್ಥಾನಕ್ಕೆ ಪೈಕಿ 31 ಜನ ಸ್ಪರ್ಧಿಸಿದ್ದರು. ಇದರಲ್ಲಿ ಇಬ್ಬರ ಅವಿರೋಧ ಆಯ್ಕೆಯಾಗಿತ್ತು.

ಶಿವಮೊಗ್ಗ ವಿಭಾಗ :

ಶಿವಮೊಗ್ಗ ವಿಭಾಗದಿಂದ ಆರ್.ಎಂ.ಮಂಜುನಾಥ್ ಗೌಡ ಅವಿರೋಧ ಆಯ್ಕೆಯಾಗಿದ್ದು, ಭದ್ರಾವತಿಯಿಂದ ಸ್ಪರ್ಧಿಸಿದ್ದ ಶಿಮುಲ್ ಮಾಜಿ ಅಧ್ಯಕ್ಷ ಡಿ.ಆನಂದ್ ಮತ್ತೊಮ್ಮೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗ ತಾಲೂಕಿನಿಂದ ಸ್ಪರ್ಧಿಸಿದ್ದ ಹೆಚ್.ಬಿ.ದಿನೇಶ್ ಬಹುಮತ ಪಡೆಯುವ ಮೂಲಕ ವಿಜಯಶಾಲಿಯಾಗಿದ್ದಾರೆ.

ಸಾಗರ ವಿಭಾಗ :

ಸಾಗರ ವಿಭಾಗದಿಂದ ವಿದ್ಯಾಧರ್ ಅವಿರೋಧ ಆಯ್ಕೆಯಾಗಿದ್ದು, ಟಿ.ಶಿವಶಂಕರಪ್ಪ, ಟಿ.ಎಸ್.ದಯಾನಂದ ಗೌಡ್ರು ಜಯಭೇರಿ ಭಾರಿಸಿದ್ದಾರೆ.

ದಾವಣಗೆರೆ ವಿಭಾಗ :

ದಾವಣಗೆರೆ ವಿಭಾಗದಿಂದ ಶಿಮುಲ್ ಮಾಜಿ ಉಪಾಧ್ಯಕ್ಷ ಹೆಚ್.ಕೆ.ಬಸಪ್ಪ, ಜಗದೀಶಪ್ಪ ಬಣಕಾರ್, ಚೇತನ್ ಎಸ್.ನಾಡಿಗೇರ್, ಬಿ.ಜಿ.ಬಸವರಾಜಪ್ಪ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ ವಿಭಾಗ :

ಚಿತ್ರದುರ್ಗ ವಿಭಾಗದಿಂದ ಜಿ.ಪಿ.ರೇವಣಸಿದ್ದಪ್ಪ, ಶೇಖರಪ್ಪ.ಜಿ.ಬಿ, ಸಂಜೀವಮೂರ್ತಿ, ಬಿ.ಆರ್.ರವಿಕುಮಾರ್ ಆಯ್ಕೆಯಾಗಿದ್ದಾರೆ.

About The Author

Leave a Reply

Your email address will not be published. Required fields are marked *