ಮಾಜಿ ಕಾರ್ಪೋರೆಟರ್ ಮೊಟ್ಟೆ ಸತೀಶ್ ಮೇಲೆ ಗುಂಪಿನಿಂದ ಹಲ್ಲೆ.!
ಮಾಜಿ ಕಾರ್ಪೊರೇಟರ್ ಮೊಟ್ಟೆ ಸತೀಶ್ ಎಂಬವರ ಮೇಲೆ ಗುರುವಾರ ರಾತ್ರಿ ಹಲ್ಲೆ ನಡೆದಿರುವ ಘಟನೆ ನಗರದಲ್ಲಿ ನಡೆದಿದೆ.
ಮಾಜಿ ಕಾರ್ಪೊರೇಟರ್ ಸತ್ಯನಾರಾಯಣ ರಾಜು (ಮೊಟ್ಟೆ ಸತೀಶ್) ಎಂಬವರ ಮೇಲೆ ಕುಸ್ಕೂರು ಬಳಿ ಜಮೀನು ವಿಚಾರವಾಗಿ ಈ ಹಲ್ಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಜಮೀನು ಖರೀದಿ ವಿಚಾರಕ್ಕೆ ಸತೀಶ್ ವ್ಯಾಜ್ಯ ಹೊಂದಿದ್ದರೆನ್ನಲಾಗಿದೆ.
ಸತೀಶ್ ಗುರುವಾರ ದಿನ ರಾತ್ರಿ ತಮ್ಮ ಜಮೀನಿನ ಬಳಿ ತೆರಳಿದ್ದಾಗ, ಅವರ ಕಾರಿನ ಮೇಲೆ ದೊಣ್ಣೆಗಳಿಂದ ತಂಡವೊಂದು ದಾಳಿ ನಡೆಸಿದೆ. ಸತೀಶ್ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ. ತಮ್ಮ ಮೇಲೆ ಹಲ್ಲೆಯ ಆತಂಕದಿಂದ ಸತೀಶ್ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಸಂಬಂಧ ಪ್ರತಿಕ್ರಿಯಿಸಿರುವ ಎಸ್ಪಿ ಮಿಥುನ್ ಕುಮಾರ್ ಜಿ.ಕೆ., ಮೊಟ್ಟೆ ಸತೀಶ್ ಮೇಲೆ ಜಮೀನು ವ್ಯಾಜ್ಯದ ಸಲುವಾಗಿ ಹಲ್ಲೆ ನಡೆದಿದೆ. ಜಮೀನು ಖರೀದಿಯ ವಿಚಾರಕ್ಕೆ ಸತ್ಯನಾರಾಯಣ ರಾಜು ವ್ಯಾಜ್ಯ ಹೊಂದಿದ್ದರು. ಅದೇ ಕಾರಣಕ್ಕೆ ಅವರ ಮೇಲೆ ಹಲ್ಲೆ ನಡೆದಿದೆ. ಈ ಪ್ರಕರಣದಲ್ಲಿ ರೌಡಿ ಎಲಿಮೆಂಟ್ಸ್ ಕಂಡುಬಂದಿಲ್ಲ ಎಂದಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್