Ripponpete | ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷತೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷತೆಗಾಗಿ  ಪ್ರಾರ್ಥಿಸಿ ವಿಶೇಷ ಪೂಜೆ

ರಿಪ್ಪನ್‌ಪೇಟೆ : ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುರಕ್ಷಿತವಾಗಿ ಭೂಮಿಗೆ ಮರಳಲಿ ಎಂದು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪದ್ಮಾ ಸುರೇಶ್ ನೇತ್ರತ್ವದಲ್ಲಿ ಪಟ್ಟಣದ ಶ್ರೀ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ಮಾತನಾಡಿದ ಪದ್ಮಾ ಸುರೇಶ್ ಅಮೆರಿಕದ ಮೂಲದ ಬುಚ್ ವಿಲ್ಮೋರ್ ಜೊತೆ ಬಾಹ್ಯಾಕಾಶಯಾನ ಕೈಗೊಂಡಿದ್ದ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್‌ 52 ದಿನವಾದರೂ ಭೂಮಿಗೆ ಮರಳಿಲ್ಲ. ತಾಂತ್ರಿಕ ಸಮಸ್ಯೆಯ ಕಾರಣಕ್ಕೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ತಮ್ಮ ಸಹೋದ್ಯೋಗಿ ಗಗನಯಾತ್ರಿ ಬುಚ್ ವಿಲ್ಮೋರ್ ಅವರೊಂದಿಗೆ ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ, ಸುನಿತಾ ವಿಲಿಯನ್ಸ್ ಉಳಿದುಕೊಂಡಿದ್ದಾರೆ. ಅವರ ವಾಹನದಲ್ಲಿ ಹಲವು ತಾಂತ್ರಿಕ ದೋಷಗಳು ಕಾಣಿಸಿಕೊಂಡಿವೆ. ಆದ್ದರಿಂದ ಅವರು ಭೂಮಿಗೆ ತೆರಳದೇ ಅಲ್ಲೇ ಉಳಿಯುವಂತಾಗಿದೆ. ಎರಡು ಬಾರಿ ಯಶಸ್ವಿಯಾಗಿ ಗಗನಯಾತ್ರೆ ಮಾಡಿದಾಗ ಇಡೀ ದೇಶವೇ ಸಂಭ್ರಮಿಸಿತ್ತು. ಅವರು ಭೂಮಿಗೆ ಜೂನ್ 14ರಂದು ವಾಪಾಸ್ಸಾಗಬೇಕಿತ್ತು. ಆದರೆ, ಈಗಾಗಲೇ ಎರಡು ತಿಂಗಳು ಹೆಚ್ಚುವರಿಯಾಗಿದೆ.ಅವರು ಸುರಕ್ಷಿತವಾಗಿ ಭೂಮಿಗೆ ಹಿಂದಿರಗಬೇಕು. ಭಾರತ ದೇಶಕ್ಕೆ ಮತ್ತಷ್ಟು ಕೀರ್ತಿ ತರಬೇಕು ಎಂದು ಪ್ರಾರ್ಥಿಸಿ ಸಿದ್ದಿವಿನಾಯಕ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ ಎಂದರು.

ಈ ಸಂಧರ್ಭದಲ್ಲಿ ರೇಖಾ ರವಿ ರಾವ್, ಗೀತಾ ಕರಿಬಸಪ್ಪ, ಲಕ್ಷ್ಮೀ ಶ್ರೀನಿವಾಸ, ನಾಗರತ್ನ ದೇವರಾಜ್, ಅರ್ಚಕರಾದ ಚಂದ್ರಶೇಖರ್ ಭಟ್ ಹಾಗೂ ಇನ್ನಿತರರಿದ್ದರು.

Leave a Reply

Your email address will not be published. Required fields are marked *