Accident | ಪಿಕಪ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ
ಮಾಸ್ತಿಕಟ್ಟೆ : ಪಿಕಪ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೋರ್ವರಿಗೆ ಗಂಭೀರ ಗಾಯಗೊಂಡಿರುವ ಘಟನೆ
ಹುಲಿಕಲ್ ಸಮೀಪದಲ್ಲಿ ನಡೆದಿದೆ.
ಪಿಕಪ್ ವಾಹನ ಚಾಲಕನ ಅಜಾಗರೂಕತೆಯಿಂದ ಅತಿ ವೇಗದಿಂದ ಓಮ್ನಿ ಕಾರಿಗೆ ಡಿಕ್ಕಿಯಾದ ಪರಿಣಾಮ ಕಾರು ಚಾಲಕನ ಎರಡು ಕಾಲು ತುಂಡಾದ ಘಟನೆ ನಡೆದಿದೆ.
ಘಟನೆಯಲ್ಲಿ ಹುಲಿಕಲ್ ನರಸಿಂಹಸ್ವಾಮಿ ದೇವಸ್ಥಾನದ ಧರ್ಮದರ್ಶಿ ಸಮಿತಿ ಅಧ್ಯಕ್ಷ ಕೇಶವಮೂರ್ತಿ ಎಂಬುವವರ ಎರಡು ಕಾಲು ತುಂಡಾಗಿದ್ದು ಗಂಭೀರ ಗಾಯಗೊಂಡ ಇವರನ್ನು ಉಡುಪಿಯ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.
ಸಿದ್ಧಾಪುರದಿಂದ ಹೊಸನಗರ ಕಡೆ ಬರುತ್ತಿದ ಪಿಕಪ್ ವಾಹನದ ಚಾಲಕ ಮದ್ಯ ಸೇವಿಸಿದ್ದಾನೆ ಎಂದು ಆರೋಪಿಸಿ ಸಾರ್ವಜನಿಕರು ಈತನನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ಸಹ ನಡೆಯಿತು.ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಪಘಾತದ ಹಿನ್ನಲೆಯಲ್ಲಿ ಅರ್ಧ ಗಂಟೆಗೂ ಅಧಿಕ ಹೊತ್ತು ಕುಂದಾಪುರ-ಹೊಸನಗರ ರಾಜ್ಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.