ಕಳುವಾಗಿದ್ದ 2.40 ಲಕ್ಷ ರೂ ಮೌಲ್ಯದ 4 ಹಸುಗಳನ್ನ ಪತ್ತೆ ಮಾಡುವಲ್ಲಿ ಶಿರಾಳಕೊಪ್ಪದ ಪೊಲೀಸರು ಯಶಸ್ವಿಯಾಗಿದ್ದಾರೆ.
ನಡೆದಿದ್ದೇನು..!???
ದಿನಾಂಕಃ 09-08-2024 ರಂದು ರಾತ್ರಿ ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಜಂಬೂರು ಗ್ರಾಮದ ವಾಸಿ ಶ್ರೀ ಮೊಹಮದ್ ಆಲಿ ಖಾನ್, 34 ವರ್ಷ ರವರ ಫಾರಂ ಹೌಸ್ ನಲ್ಲಿದ್ದ 04 ಹಸುಗಳನ್ನು ಕಳುವು ಮಾಡಲಾಗಿತ್ತು. ಬಿಎನ್ ಎಸ್ ಕಾಯ್ದೆ ಅಡಿ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣದಲ್ಲಿ ಕಳುವಾದ ಮಾಲು ಹಾಗೂ ಮಾಲಿನ ಪತ್ತೆಗಾಗಿ ಜಿಲ್ಲಾರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ.ಕೆರವರ ಮಾರ್ಗದರ್ಶನದಲ್ಲಿ ಶಿಕಾರಿಪುರದ ಡಿವೈಎಸ್ಪಿ ಕೇಶವ್, ಸಿಪಿಐ ರುದ್ರೇಶ್ ರವರ ಮೇಲ್ವಿಚಾರಣೆಯಲ್ಲಿ ಪಿಎಸ್ಐ ಪ್ರಶಾಂತ್ ಕುಮಾರ್ ಟಿ.ಬಿ.ರವರ ನೇತೃತ್ವದಲ್ಲಿ ಪಿಎಸ್ಐ ಪುಷ್ಪಾ, ಮತ್ತು ಸಿಬ್ಬಂಧಿಗಳಾದ ಹೆಚ್.ಸಿ ಸಂತೋಷ್, ಟೀಕಪ್ಪ, ಪಿಸಿ ಸಲ್ಮಾನ್, ಕಾರ್ತಿಕ್, ಅಶೋಕ್ ಮತ್ತು ಪ್ರೇಮಾ ಬಾಯಿ ರವರುಗಳನ್ನೊಳಗೊಂಡ ತನಿಖಾ ತಂಡವನ್ನು ರಚಿಸಲಾಗಿತ್ತು.
ತನಿಖಾ ತಂಡವು ದಿನಾಂಕಃ 23-08-2024 ರಂದು ಪ್ರಕರಣದ ಆರೋಪಿ ಶಿವರಾಜ್ @ ಕುಮಾರ, 26 ವರ್ಷ, ಆರಿಕಟ್ಟೆ ಗ್ರಾಮ, ಹಿರೇಕೆರೂರು ತಾ॥, ಹಾವೇರಿ ಜಿಲ್ಲೆ ಈತನನ್ನು ದಸ್ತಗಿರಿ ಮಾಡಿ ಆರೋಪಿತನಿಂದ ಅಂದಾಜು ಮೌಲ್ಯ 2,40,000/- ರೂಗಳ 04 ಹಸುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್