ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಯುವಕ ಸಾವು
ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಕ್ಕಮಹಾದೇವಿ ಜನ್ಮಸ್ಥಳ ಉಡತಡಿ ಗ್ರಾಮದಲ್ಲಿ ನಡೆದಿದೆ.
ಹೌದು ಕಲ್ಯಾಣಿ ಬಳಿ ಪೋಟೋ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಕ್ಕಮಹಾದೇವಿ ಜನ್ಮಸ್ಥಳ ಉಡತಡಿ ಗ್ರಾಮದಲ್ಲಿ ನಡೆದಿದೆ.
ಶಿರಾಳಕೊಪ್ಪದ ಗಂಡಗದಕೇರಿಯ ನಿವಾಸಿ ತಾಹೀರ್(21) ಮೃತ ಯುವಕ.
ಸ್ನೇಹಿತರೊಂದಿಗೆ ಅಕ್ಕಮಹಾದೇವಿ ಜನ್ಮಸ್ಥಳ ನೋಡಲು ಬಂದಿದ್ದ ವೇಳೆ ಸೆಲ್ಫಿ ತೆಗೆದುಕೊಳ್ಳುವಾಗ ಕಾಲುಜಾರಿ ಬಿದ್ದು ದುರ್ಘಟನೆ ನಡೆದಿದೆ.
ಈ ಕುರಿತು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.