ಯಡಿಯೂರಪ್ಪ ಮತ್ತು ಮಕ್ಕಳ ಕರ್ಮಕಾಂಡವನ್ನು ಸದ್ಯದಲ್ಲೇ ಬಯಲಿಗೆ ಎಳೆಯುತ್ತೇನೆ – ಶಾಸಕ ಬೇಳೂರು

ಯಡಿಯೂರಪ್ಪ ಹಾಗೂ ಅವರ ಮಕ್ಕಳ ಕರ್ಮಕಾಂಡವನ್ನು ಸದ್ಯದಲ್ಲಿಯೇ ಬಯಲಿಗೆ ಎಳೆಯುತ್ತೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಆನಂದಪುರದಲ್ಲಿ ನೂತನ ಬಸ್ ನಿಲ್ದಾಣದ ಕಾಮಗಾರಿಯನ್ನು ಗುರುವಾರ ಸಂಜೆ ವೀಕ್ಷಿಸಿ ಪತ್ರಕರ್ತರೊಂದಿಗೆ ಮಾತನಾಡಿ ಡಿಸಿಸಿ ಬ್ಯಾಂಕ್ ಹುದ್ದೆ ಗಳ ನೇಮಕಾತಿ ಹಾಗೂ ಸಾಗರ ಸಾಯಿ ಗಾರ್ಮೆಂಟ್ ಗೆ ನೀಡಿದ 145 ಎಕರೆ ಭೂಮಿ ವಿಚಾರದಲ್ಲಿ ನಡೆದ ಅಕ್ರಮ ನಡೆದಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು ಅಕ್ರಮವನ್ನು ಶೀಘ್ರದಲ್ಲಿ ಬಯಲಿಗೆಳೆಯುತ್ತೆನೆಂದು ಎಂದರು.

ಡಿಸಿಸಿ ಬ್ಯಾಂಕಿನ ಹಿಂದಿನ ಅವಧಿಯಲ್ಲಿ ಬ್ಯಾಂಕಿನ ವಿವಿಧ ಹುದ್ದೆಗಳ ನೇಮಕಾತಿಯ ಸಂದರ್ಭದಲ್ಲಿ ಸಂಸದ ಬಿ.ವೈ ರಾಘವೇಂದ್ರ ಅಕ್ರಮ ವೆಸಗಿರುವ ಬಗ್ಗೆ ಡಿಸಿಸಿ ಬ್ಯಾಂಕ್ ನಿರ್ದೇಶಕರ ಸಭೆಯಲ್ಲಿ ಪ್ರಸ್ತಾಪ ಬಂದಿದ್ದು ಅಕ್ರಮ ನಡೆಸಿದವರ ವಿರುದ್ಧ ದೂರು ದಾಖಲಿಸುವಂತೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಿಗೆ ಶಾಸಕನಾದ ನಾನು ಒತ್ತಾಯಿಸಿದ್ದೇನೆ ಎಂದು ತಿಳಿಸಿದರು.

ಸಾಗರ, ಹೊಸನಗರ ಕ್ಷೇತ್ರದ ಸ್ಥಳಿಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಸಾಧಿಸಿದೆ. ಕಾರ್ಗಲ್ ಪಟ್ಟಣ ಪಂಚಾಯಿತಿ ಹಾಗೂ ಹೊಸನಗರ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರ ಸಹಕಾರದೊಂದಿಗೆ ಅಧ್ಯಕ್ಷ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಿ ಕಾಂಗ್ರೆಸ್ ಪಕ್ಷ ಇತಿಹಾಸ ಸೃಷ್ಟಿಸಿದೆ.

ಶಿಮುಲು ಆಡಳಿತ ಮಂಡಳಿಯ ಅಧ್ಯಕ್ಷರ ಆಯ್ಕೆಯಲ್ಲಿ ಶಿವಮೊಗ್ಗ ,ದಾವಣಗೆರೆ, ಚಿತ್ರದುರ್ಗ ಮೂರು ಜಿಲ್ಲೆಗಳಿಂದ 14 ಮಂದಿ ನಿರ್ದೇಶಕರಿದ್ದು ಮಂಜುನಾಥ್ ಗೌಡ ಅವರ ನೇತೃತ್ವದಲ್ಲಿ ಎಲ್ಲಾ ಪಕ್ಷದವರನ್ನು ಒಂದುಗೂಡಿಸಿ ಸಹಕಾರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಅವಿರೋಧವಾಗಿ ಆಯ್ಕೆ ಮಾಡುವುದರ ಮೂಲಕ ಸಹಕಾರ ಸಂಘ ಹೀಗೆ ಇರಬೇಕು ಎಂದು ಸಂದೇಶ ನೀಡಿದ್ದೇವೆ. ಮುಂದೆ ನಡೆಯುವ ಸಾಗರ ನಗರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಗಳಿಸುವ ವಿಶ್ವಾಸವಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *