ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 97.78% ಫಲಿತಾಂಶ
ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜೆಗೆ
2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1 ರಲ್ಲಿ 97.78 ಫಲಿತಾಂಶ ಬಂದಿದೆ.ಕಲಾ ವಿಭಾಗ 98.57% ವಿಜ್ಞಾನ ವಿಭಾಗ ದಲ್ಲಿ 95.77%, ವಾಣಿಜ್ಯ ವಿಭಾಗ 98.82% ರಷ್ಟು ವಿದ್ಯಾರ್ಥಿಗಳು ಉತ್ತೀರಣರಾಗಿದ್ದಾರೆ.
ಈ ಬಾರಿಯ ಪರೀಕ್ಷೆಯಲ್ಲಿ 226 ವಿದ್ಯಾರ್ಥಿಗಳು ಪರೀಕ್ಷೆಯನ್ನು ತೆಗೆದುಕೊಂಡಿದ್ದು.221 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಕಾಲೇಜಿನ ಹಂತದಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು
ಭೂಮಿಕಾ – 559 -ವಿಜ್ಞಾನ
ಇಂಚರ – 577- ವಾಣಿಜ್ಯ
ತುಳಸಿ – 578 – ಕಲಾ ವಿಭಾಗ
ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ನೀಡಿದ ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಾಸಕ ಬೇಳೂರು ಗೋಪಾಲಕೃಷ್ಣ ,ಪ್ರಾಚಾರ್ಯರಾದ ಮಂಜುನಾಥ್ , ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು ಮತ್ತು ಸದಸ್ಯರು ,ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್