ರಿಪ್ಪನ್ಪೇಟೆ ,ಕರಾವಳಿ ಭಾಗ ಮತ್ತು ಚಿಕ್ಕಮಗಳೂರಿನಲ್ಲಿ ನಾಳೆ(10-04-2024) ಈದ್ ಉಲ್ ಫಿತರ್ ಹಬ್ಬ ಆಚರಣೆ
ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್ರ್ ಆಚರಿಸಲು ತೀರ್ಮಾನಿಸಲಾಗಿದೆ.ಅದರದೊಂದಿಗೆ ಹಾಸನ, ಚಿಕ್ಕಮಗಳೂರು ಜಿಲ್ಲೆಯಲ್ಲೂ ಈದುಲ್ ಫಿತರ್ ಆಚರಣೆ ನಡೆಯಲಿದೆ.
ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ,ರಿಪ್ಪನ್ಪೇಟೆ ಪಟ್ಟಣದಲ್ಲಿಯೂ ನಾಳೆಯೇ ಈದುಲ್ ಫಿತ್ ರ್ ಆಚರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ಗುರುವಾರ ಈದುಲ್ ಫಿತ್ ರ್ ಆಚರಣೆ
ಬೆಂಗಳೂರು : ಶವ್ವಾಲ್ ತಿಂಗಳ ಚಂದ್ರದರ್ಶನವಾಗದ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಗುರುವಾರ ಈದುಲ್ ಫಿತರ್ ಆಚರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ಚಂದ್ರ ದರ್ಶನ ಸಮಿತಿ ಸಂಚಾಲಕ ಮೌಲಾನ ಮಕ್ಸೂದ್ ಇಮ್ರಾನ್ ಹೇಳಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್