ಜ್ಯೂಸ್ ಬಾಟಲ್ ನ ಮುಚ್ಚಳ ನುಂಗಿ ಮಗು ಸಾವು
ಮನೆಯಲ್ಲಿ ಆಟವಾಡುತಿದ್ದ ಮಗು ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿ ಉಸಿರಾಟದ ತೊಂದರೆಯಿಂದ ಮೃತಪಟ್ಟ ದಾರುಣ ಘಟನೆ, ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿ ಯಲ್ಲಿ ಹರಗುವಳ್ಳಿ ಗ್ರಾಮದಲ್ಲಿ ದುರ್ಘಟನೆ ನಡೆದಿದೆ.
ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಒಂದೂವರೆ ವರ್ಷದ ಪುತ್ರ ನಂದೀಶ್ ಮೃತಪಟ್ಟ ದುರ್ಧೈವಿಯಾಗಿದ್ದಾನೆ.
ಬುಧವಾರ ಬೆಳಿಗ್ಗೆ ಮನೆಯಲ್ಲಿ ಜ್ಯೂಸ್ ಬಾಟಲಿ ಹಿಡಿದುಕೊಂಡು ಮಗು ಆಟವಾಡುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಮುಚ್ಚಳ ನುಂಗಿದ್ದು ಅದು ಗಂಟಲಲ್ಲಿ ಸಿಲುಕಿ ಮಗುವಿನ ಉಸಿರಾಟದಲ್ಲಿ ಏರುಪೇರಾಗಿದೆ.
ಕೂಡಲೇ ಕುಟುಂಬದವರು ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೊರಟಿದ್ದಾರೆ ಅಷ್ಟರಲ್ಲಾಗಲೇ ಮಾರ್ಗ ಮಧ್ಯದಲ್ಲೇ ಮಗು ಕೊನೆಯುಸಿರೆಳೆದಿದೆ.