ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಸಮಟಗಾರು ಶಾಲೆಯ ಅಂಬಿಕಾ ಲಕ್ಷ್ಮಣರಾವ್

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಸಮಟಗಾರು ಶಾಲೆಯ ಅಂಬಿಕಾ ಲಕ್ಷ್ಮಣರಾವ್|

ಶಿಕ್ಷಕರ ದಿನಾಚರಣೆ ಅಂಗವಾಗಿ ಶಾಲಾ ಶಿಕ್ಷಣ ಇಲಾಖೆಯಿಂದ 2024–25ನೇ ಸಾಲಿನಲ್ಲಿ ನೀಡುವ ‘ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಹೊಸನಗರ ತಾಲೂಕಿನ ಸಮಟಗಾರು ಶಾಲೆಯ ಅಂಬಿಕಾ ರವರು ಭಾಜನರಾಗಿದ್ದಾರೆ.

ಇಂದು ಶಿವಮೊಗ್ಗದಲ್ಲಿ ಜಿಲ್ಲಾಡಳಿತ, ಜಿ.ಪಂ., ಉಪ ನಿರ್ದೇಶಕರ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅಂಬಿಕಾ ಲಕ್ಷ್ಮಣರಾವ್ ರವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಮೂಲತಃ ರಿಪ್ಪನ್‌ಪೇಟೆಯವರಾದ ಅಂಬಿಕಾ ಲಕ್ಷ್ಮಣರಾವ್ ಪ್ರಸ್ತುತ ಕೋಡೂರು ಗ್ರಾಪಂ ವ್ಯಾಪ್ತಿಯ ಹಿಂಡ್ಲೆಮನೆ ಗ್ರಾಮದಲ್ಲಿದ್ದು MA Bed ವ್ಯಾಸಾಂಗ ಪದವಿ ಪಡೆದಿದ್ದಾರೆ. ಹೊಸನಗರ ತಾಲೂಕಿನ ಸಮಟಗಾರು ಶಾಲೆಯಲ್ಲಿ ಕಳೆದ 17 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅಂಬಿಕಾ ಲಕ್ಷ್ಮಣರಾವ್ ಶಾಲೆಯ ಸರ್ವತೋಮುಖ ಅಭಿವೃದ್ದಿಗೆ ಶ್ರಮಿಸಿದ್ದಾರೆ, ಇವರು ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಪರಿಸರ ಮಿತ್ರ ಶಾಲೆ, ಧನ್ವಂತರಿ ಶಾಲೆ, ಉತ್ತಮಪರಿಸರ ಶಾಲೆ ಪ್ರಶಸ್ತಿ ಪಡೆದಿರುತ್ತದೆ.

ಶಿಕ್ಷಣ, ಕ್ರೀಡೆ, ಕಲೆ, ಸಾಹಿತ್ಯ, ರಂಗಭೂಮಿ, ಹೀಗೆ ಮುಂತಾದ ಕ್ಷೇತ್ರಗಳಲ್ಲಿ ಸಮರ್ಪಣಾ ಮನೋಭಾವದಿಂದ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ತಾವೊಬ್ಬ ಕ್ರಿಯಾಶೀಲ ಶಿಕ್ಷಕರು ಎಂಬುದನ್ನು ನಿರೂಪಿಸಿದ ಬಹುಮುಖ ಪ್ರತಿಭೆಯಾಗಿರುವ ಅಂಬಿಕಾ ರವರು ಕವಿಗೋಷ್ಟಿಗಳಲ್ಲಿ ಹಾಗೂ ಕಾರ್ಯಕ್ರಮಗಳಲ್ಲಿ ಅದ್ಭುತವಾಗಿ ನಿರೂಪಣೆ ಮಾಡಿಯೂ ಸೈ ಎನಿಸಿಕೊಂಡಿದ್ದಾರೆ.

“ಶಿಕ್ಷಕ ಸಮಾಜದ ಅತ್ಯಂತ ದೊಡ್ಡ ಆಸ್ತಿ. ಏಕೆಂದರೆ ಆತನ ವೃತ್ತಿಪರ ಪ್ರಯತ್ನಗಳು ಭೂಮಿಯ ಭವಿಷ್ಯದ ಮೇಲೆ ಅಗಾಧವಾದ ಪರಿಣಾಮವನ್ನು ಬೀರುತ್ತವೆ.”ಎಂಬ ಮಾತಿನಂತೆ ತಮ್ಮ ಜ್ಞಾನದ ವಿನಿಮಯ ಹಾಗೂ ವಿಸ್ತರಣೆಯಲ್ಲಿ ಕ್ರಿಯಾತ್ಮಕವಾಗಿ ತೊಡಗಿಕೊಂಡು ಉತ್ತಮ ಸೇವೆಗೈಯುತ್ತಿರುವ ಕಾರಣದಿಂದಾಗಿ  ಶಿಕ್ಷಣ ಇಲಾಖೆ ಇವರನ್ನು ಗುರುತಿಸಿ ಜಿಲ್ಲಾ ಮಟ್ಟದ “ಅತ್ಯುತ್ತಮ ಶಿಕ್ಷಕಿ” ಪ್ರಶಸ್ತಿಗೆ ಪರಿಗಣಿಸಿ ಆಯ್ಕೆ ಮಾಡಿರುವುದು ಅತ್ಯಂತ ಸ್ತುತ್ಯಾರ್ಹ.

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಅಂಬಿಕಾ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆ ಅಭಿನಂದನೆಗಳನ್ನು ಸಲ್ಲಿಸುತ್ತದೆ.

Leave a Reply

Your email address will not be published. Required fields are marked *