ಶಿಕ್ಷಣದೊಂದಿಗೆ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಿ – ಶಾಸಕ ಬೇಳೂರು ಗೋಪಾಲಕೃಷ್ಣ

ಶಿಕ್ಷಣದೊಂದಿಗೆ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಿ – ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ : ಪಠ್ಯದೊಂದಿಗೆ ಕ್ರೀಡಾಸಕ್ತಿಯನ್ನು ಮಕ್ಕಳಲ್ಲಿ ಬೆಳಸುವುರಿಂದಾಗಿ ಮಕ್ಕಳ ಮನೋಸ್ಥರ್ಯ ವೃದ್ದಿಯಾಗುವುದು ಮತ್ತು ಮೊಬೈಲ್ ಬಳಕೆಯಿಂದಾಗಿ ಮಕ್ಕಳಲ್ಲಿ ಕ್ರೀಡಾ ಚಟುವಟಿಕೆ ಕ್ಷೀಣಿಸುವಂತಾಗಿರುವುದರ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಜಾಗೃತರಾಗಿ ಮೊಬೈಲ್‌ನಿಂದ ಅದಷ್ಟು ದೂರವಿಡುವಂತಾಗಬೇಕು ಎಂದು ಸಾಗರ ವಿಧಾನ ಸಭಾಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು ಹೇಳಿದರು.

ರಿಪ್ಪನ್‌ಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಮೇರಿ ಮಾತಾ ಪ್ರೌಡಶಾಲೆ ಮತ್ತು ಕ್ಷೇತ್ರ ಶಿಕ್ಷಣಾ ಇಲಾಖೆ, ಗ್ರಾಮ ಪಂಚಾಯ್ತಿ ರಿಪ್ಪನ್‌ಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ 17 ವರ್ಷದೊಳಗಿನ ಶಾಲಾ ಬಾಲಕ ಬಾಲಕಿಯರ ವಲಯ ಮಟ್ಟದ 2024-25 ನೇ ಸಾಲಿನ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಯಿಂದ ಮಕ್ಕಳ ದೈಹಿಕ ಸಾಮರ್ಥ್ಯದೊಂದಿಗೆ ಜ್ಞಾಪನಾ ಶಕ್ತಿ ವೃದ್ದಿಯಾಗುವುದೆಂದು ಹೇಳಿ ಅದಷ್ಟು ಮಕ್ಕಳು ಮೊಬೈಲ್ ಬಳಕೆಯಿಂದ ದೂರವಿದ್ದು ಹೆಚ್ಚಾಗಿ ಕ್ರೀಡೆಯಲ್ಲಿ ಭಾಗವಹಿಸುವಂತೆ ಮಾಡಿ ಎಂದರು.

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ, ಮಲೆನಾಡಿನಲ್ಲಿ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳು ಉತ್ತಮ ಸಾಧನೆಯನ್ನು ಪ್ರಕಟಿಸುತ್ತಿರುವುದು ಸ್ವಾಗತವಾಗಿದೆ ಎಂದರು.

ಗ್ರಾಮ ಪಂಚಾಯ್ತಿ ಆಧ್ಯಕ್ಷೆ ಧನಲಕ್ಷಿö್ಮ ಗಂಗಾಧರ ಕ್ರೀಡಾಜ್ಯೋತಿ ಸ್ವೀಕರಿಸಿದರು. ಮೇರಿಮಾತಾ ಪ್ರೌಡಶಾಲೆಯ ಸಿಸ್ಟರ್ ಗ್ರೇಸ್ಲಿನ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂಧರ್ಭದಲ್ಲಿ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ , ಗ್ರಾಮ ಪಂಚಾಯತಿ ಉಪಾಧ್ಯಕ್ಷ  ಸುಧೀಂದ್ರ ಪೂಜಾರಿ, ಸದಸ್ಯರಾದ ಡಿ.ಈ ಮಧುಸೂದನ್, ಆಶೀಫ್‌ ಭಾಷಾ, ಗಣಪತಿ ಗವಟೂರು, ಎನ್.ಚಂದ್ರೇಶ್, ಸಾರಾಭಿ, ಅಶ್ವಿನಿ ರವಿಶಂಕರ್, ಮೇರಿ ಮಾತಾ ಪ್ರೌಢಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಅಲೆಕ್ಸ್, ದೈಹಿಕ ಶಿಕ್ಷಣಾಧಿಕಾರಿ ಬಾಲಚಂದ್ರ, ರವೀಂದ್ರ ಕೆರೆಹಳ್ಳಿ, ರಮೇಶ ಫ್ಯಾನ್ಸಿ, ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡರು ಹಾರೋಹಿತ್ತಲು, ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಇನ್ನಿತರರು ಹಾಜರಿದ್ದರು.

Leave a Reply

Your email address will not be published. Required fields are marked *