w
Headlines
Home » ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿ ಮೇಲೆ ದಾಳಿ – ಓರ್ವ ವಶಕ್ಕೆ

ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿ ಮೇಲೆ ದಾಳಿ – ಓರ್ವ ವಶಕ್ಕೆ

Screenshot 20240916 152252 Chrome.jpg

ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿ ಮೇಲೆ ದಾಳಿ – ಅಕ್ರಮ ಮದ್ಯ ವಶಕ್ಕೆ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಮರಸ ಗ್ರಾಮದಲ್ಲಿ ಅಂಗಡಿಯೊಂದರಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮಾಹಿತಿ ಆಧರಿಸಿ, ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ, ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಬಕಾರಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ.ಮರಸ ಗ್ರಾಮದ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಂತ ಮಾಹಿತಿ ಆಧರಿಸಿ ಅಬಕಾರಿ ಇನ್ಸ್ ಪೆಕ್ಟರ್ ಸಂದೀಪ್ ಕುಮಾರ್ ನೇತೃತ್ವದಲ್ಲಿ ದಾಳಿಯನ್ನು ನಡೆಸಲಾಗಿದೆ.

ಈ ದಾಳಿಯ ವೇಳೆಯಲ್ಲಿ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡಲು ಇರಿಸಲಾಗಿದ್ದಂತ 22 ಟೆಟ್ರಾ ಪ್ಯಾಕೇಟ್ ಅಂದರೆ 1.8 ಲೀಟರ್ ಮದ್ಯವನ್ನು ಸೀಜ್ ಮಾಡಿದ್ದಾರೆ.

ಈ ಸಂಬಂಧ ಅಂಗಡಿಯ ಮಾಲೀಕರನ್ನು ವಶಕ್ಕೆ ಪಡೆದು, ಆ ಬಳಿಕ ವಿಚಾರಣೆ ನಡೆಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಮರಸ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವರಿಗೆ ಬಿಗ್ ಶಾಕ್ ಅನ್ನು ಸಾಗರ ತಾಲ್ಲೂಕಿನ ಅಬಕಾರಿ ಇನ್ಸ್ ಪೆಕ್ಟರ್ ಸಂದೀಪ್ ಕುಮಾರ್ ನೀಡಿದ್ದಾರೆ.

ಇಂದು ನಡೆದಂತ ಈ ದಾಳಿಯಲ್ಲಿ ಅಬಕಾರಿ ಕಾನ್ಸ್ ಸ್ಟೇಬಲ್ ಮುದಾಸೀರ್ ಅಹ್ಮದ್, ಪುಟ್ಟಪ್ಪ ಹಾಜರಿದ್ದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.