ಆನ್ ಲೈನ್ ಗೇಮ್ ಚಾಳಿಗೆ ಬಿದ್ದು ಗ್ರಾಹಕರ ಹಣವನ್ನು ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಆನ್ ಲೈನ್ ಗೇಮ್ ಚಾಳಿಗೆ ಬಿದ್ದು ಗ್ರಾಹಕರ ಹಣವನ್ನು ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ತೀರ್ಥಹಳ್ಳಿ : ಶೋಕಿ ಜೀವನ, ದಿಢೀರ್ ಹಣ ಮಾಡುವ ದುರಾಸೆಗೆ ಒಳಗಾಗಿ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿದ್ದ ಗ್ರಾಹಕರ ಹಣವನ್ನು ವಂಚನೆ ಮಾಡಿದ್ದ ಬ್ಯಾಂಕ್ ಉದ್ಯೋಗಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.

ತಾಲೂಕಿನ ಆರಗದ ಸುನೀಲ್ (35 ವರ್ಷ) ಮೃತ ದುರ್ದೈವಿ. ಈತ ಯಡೂರಿನ ಕೆನರಾ ಬ್ಯಾಂಕ್ ನಲ್ಲಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ 8 ಖಾತೆಗಳಿಂದ ಠೇವಣಿ ಇಟ್ಟಿದ್ದ ಸುಮಾರು 1 ಕೋಟಿ ರೂಪಾಯಿಗೂ ಅಧಿಕ ಹಣವನ್ನು ವಂಚಿಸಿದ್ದ ಈ ಬಗ್ಗೆ 2023 ಡಿಸೆಂಬರ್ ನಲ್ಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಸುನಿಲ್ ಜೈಲಿಗೂ ಹೋಗಿದ್ದನು.

ನಂತರ ಜಾಮೀನಿನ ಮೇಲೆ ಹೊರ ಬಂದಿದ್ದ ಈತ ಆನ್ಲೈನ್ ವ್ಯವಹಾರದಲ್ಲಿ ಹಣ ಕಳೆದುಕೊಂಡಿದ್ದ ಎಂದು ಹೇಳಲಾಗುತ್ತಿದೆ.

ಆನ್ಲೈನ್ ವ್ಯವಹಾರ ನಡೆಸಿ ಹಣ ಕಳೆದುಕೊಂಡ ಸುನೀಲ್ ಗುರುವಾರ ವಿಷ ಸೇವಿಸಿದ್ದ ವಿಷಯ ತಿಳಿಯುತ್ತಿದ್ದಂತೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

About The Author

Leave a comment