ಸುರಿಯುವ ಮಳೆಯಲ್ಲಿ ಬಂಡೆಕಲ್ಲಿನ ಜೇನುಕಲ್ಲಮ್ಮ ದೇವಿ ಜಾತ್ರಾಮಹೋತ್ಸವ
ರಿಪ್ಪನ್ಪೇಟೆ : ಸಮೀಪದ ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ಬಂಡೆಕಲ್ಲಿನ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವವು ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯೊಂದಿಗೆ ಜರುಗಿತು.
ಇಂದು ಮುಂಜಾನೆಯಿಂದಲೇ ಭಾರಿ ಮಳೆಯ ಮಧ್ಯ ಜಗನ್ಮಾತೆ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ವಿವಿಧಡೆಗಳಿಂದ ಭಕ್ತರು ಜಮಾವಣೆಗೊಂಡು ದೇವಿಯ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಮಳೆಯಲ್ಲಿಯೇ ನಿಂತುಕೊಂಡದ್ದು ವಿಶೇಷವಾಗಿತು.
ಬೇಡಿ ಬಂದ ಭಕ್ತರ ಆಶೋತ್ತರಗಳನ್ನು ಈಡೇರಿಸುವ ತಾಯಿ ಜೇನುಕಲ್ಲಮ್ಮ ತಾಯಿಗೆ ಮದುವೆಯಾಗದವರು ಸಂತಾನ ಭಾಗ್ಯ ಹೀಗೆ ತಮ್ಮ ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸುವಂತೆ ತಾಯಿಯಲ್ಲಿ ಹರಿಕೆ ಹಣ್ಣು ಕಾಯಿ ಸಮರ್ಪಿಸುತ್ತಾ ಮಹಿಳೆಯರು ಮತ್ತು ಯುವತಿಯರು ದೇವಿಯ ಬಳಿ ಪ್ರಾರ್ಥಿಸುತ್ತಿದ್ದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಪ್ರಧಾನ ಅರ್ಚಕ ಭಾಸ್ಕರ್ ಜೋಯ್ಸಿ,ದೇವಸ್ಥಾನದ ಧರ್ಮದರ್ಶಿ ಸಮಿತಿಯ ಅಧ್ಯಕ್ಷ ಬಿ.ಸ್ವಾಮಿರಾವ್, ಧರ್ಮದರ್ಶಿಗಳಾದ ಕೆ.ಎಲ್.ಸುದೀರ್, ಸಂತೋಷ,ಹೆಚ್.ಕೆ.ಹರೀಶ್ಕಲ್ಯಾಣಪ್ಪಗೌಡ,ಪುಟ್ಟಪ್ಪ, ಶ್ರೀನಿವಾಸ ಹಿಂಡ್ಲೆಮನೆ,ರತ್ನಮ್ಮ ಕುನ್ನೂರು,ಸರೋಜ ದೇವರಾಜ್,ಕೋಡೂರು ಗ್ರಾಮ ಪಂಚಾಯ್ತಿ ಸದಸ್ಯ ಜೈಪ್ರಕಾಶ್,ಕೋಡೂರು ವಿಜೇಂದ್ರಭಟ್, ಬೆಳ್ಳೂರು ಡಾಕಪ್ಪ, ಹರತಾಳು ರಾಮಚಂದ್ರ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯೆ ಎ.ಟಿ.ನಾಗರತ್ನಮ್ಮ ಇನ್ನಿತರರು ಹಾಜರಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್