w
Headlines
Home » ಆಂಬುಲೆನ್ಸ್ ಡಿಕ್ಕಿಯಾಗಿ ಸೊನಲೆಯ ಪ್ರವೀಣ್ ಸಾವು | ವರ್ಷದ ಅಂತರದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ ಅನಾಥಳಾದ ತಾಯಿ

ಆಂಬುಲೆನ್ಸ್ ಡಿಕ್ಕಿಯಾಗಿ ಸೊನಲೆಯ ಪ್ರವೀಣ್ ಸಾವು | ವರ್ಷದ ಅಂತರದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ ಅನಾಥಳಾದ ತಾಯಿ

GridArt 20241001 125719304.jpg

ಆಂಬುಲೆನ್ಸ್ ಡಿಕ್ಕಿಯಾಗಿ ಸೊನಲೆಯ ಪ್ರವೀಣ್ ಸಾವು | ವರ್ಷದ ಅಂತರದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ ಅನಾಥಳಾದ ತಾಯಿ

ಆಂಬುಲೆನ್ಸ್ ಡಿಕ್ಕಿಯಾಗಿ ಹೊಸನಗರ ಮೂಲದ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಿಲುವಾಗಿಲು ಬಳಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೊನಲೆ ಗ್ರಾಮದ ಪ್ರವೀಣ್ (30) ಎಂದು ಗುರುತಿಸಲಾಗಿದೆ.

ನಿಲುವಾಗಿಲು ಬಳಿಯಲ್ಲಿ ಬೈಕ್ ಹಾಗೂ ಆಂಬುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಪ್ರವೀಣ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಸೇರಿದ ಆಂಬುಲೆನ್ಸ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತಿದ್ದ ಪ್ರವೀಣ್ ಹಲವು ವರ್ಷಗಳ ಹಿಂದೆಯೇ ತಂದೆಯನ್ನು ಕಳೆದುಕೊಂಡಿದ್ದು ತಾಯಿ ಕಲ್ಪನಾ ಮತ್ತು ತಂಗಿ ಸೌಮ್ಯ ಜೊತೆ ವಾಸವಿದ್ದನು, ಆದರೆ ಕಳೆದ ವರ್ಷ ಆತನ ತಂಗಿ ಸೌಮ್ಯ ಹೆರಿಗೆ ಸಂಧರ್ಭದಲ್ಲಿ ತೀರಿಕೊಂಡ ನಂತರ ಬೆಂಗಳೂರಿನ ಖಾಸಗಿ ಕಂಪನಿಯ ಕೆಲಸ ಬಿಟ್ಟು  ಸೊನಲೆಯಲ್ಲಿ ತಾಯಿಯೊಂದಿಗೆ ಇದ್ದು ತಮ್ಮ ಜಮೀನನ್ನು ನೋಡಿಕೊಂಡಿದ್ದನು.

ಈಗಾಗಲೇ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಕಲ್ಪನಾ ರವರು ಕಳೆದ ವರ್ಷ ತನ್ನ ಮಗಳನ್ನು ಕಳೆದುಕೊಂಡಿದ್ದು , ಈಗ ಮಗನನ್ನು ಕಳೆದುಕೊಂಡು ಅನಾಥವಾಗಿದ್ದಾರೆ!

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.