Shivamogga | ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಜಿ.ಎಸ್.ವರದರಾಜ್ ನೇಮಕ
ರಿಪ್ಪನ್‌ಪೇಟೆ : ಪಟ್ಟಣದ ಹಿರಿಯ ರಾಜಕಾರಣಿ ಜಿ ಎಸ್ ವರದರಾಜ್ ರವರನ್ನು ಶಿವಮೊಗ್ಗ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರನ್ನಾಗಿ ಶಿವಮೊಗ್ಗ ಜಿಲ್ಲಾ ಜೆಡಿಎಸ್ ಆಧ್ಯಕ್ಷ ಡಾ.ಕಡಿದಾಳ್ ಗೋಪಾಲ್ ನೇಮಕ ಮಾಡಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಜೆಡಿಎಸ್ ಪಕ್ಷ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಜಿ ಎಸ್ ವರದರಾಜ್ ತಾಲೂಕು ಸಮಿತಿ ಹಾಗೂ ಜಿಲ್ಲಾ ಸಮಿತಿಯ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ.
ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಜಿ ಎಸ್ ವರದರಾಜ್ ರವರಿಗೆ ರಾಜ್ಯ ಜೆಡಿಎಸ್ ಮುಖಂಡರಾದ ಅರ್ ಎ ಚಾಬುಸಾಬ್ , ತಾಲೂಕ್ ಜೆಡಿಎಸ್ ಅಧ್ಯಕ್ಷ ವರ್ತೇಶ್ ಎನ್ , ಮುಖಂಡರಾದ ಕಲ್ಲೂರು ಈರಣ್ಣ , ಆರ್ ಎನ್ ಮಂಜುನಾಥ್ ಶುಭಾಶಯಗಳನ್ನು ಕೋರಿದ್ದಾರೆ.