ಡ್ರಾಪ್ ನೀಡುವ ನೆಪದಲ್ಲಿ SSLC ವಿದ್ಯಾರ್ಥಿಯ ಕಿಡ್ನಾಪ್
ಮಾ .20 ರಂದು ನಗರದ ಬೊಮ್ಮಕಟ್ಟೆ ಬಡಾವಣೆ ನಿವಾಸಿ ಎಸ್ಎಸ್ಎಲ್ಸಿ ವಿದ್ಯಾರ್ಥಿಯನ್ನು ಕಿಡ್ನಾಪ್ ಮಾಡಿರುವಂತಹ ಘಟನೆ ನಡೆದಿತ್ತು.
ರಾಜೇಂದ್ರ ನಗರ 100 ಅಡಿ ರಸ್ತೆ ಬಳಿ ಇರುವ ಖಾಸಗಿ ಶಾಲೆಯ ವಿದ್ಯಾರ್ಥಿ ರಾಕೇಶ್ ನನ್ನು ಕಿಡ್ನಾಪ್ ಮಾಡಲಾಗಿತ್ತು.
ನಡೆದಿದ್ದೇನು..??
ಶಾಲೆಯಿಂದ ಸಂಜೆ ಮನೆಗೆ ಹೋಗುವ ಸಂದರ್ಭದಲ್ಲಿ ಘಟನೆ ನಡೆದಿದೆ. ಡ್ರಾಪ್ ಕೊಡುವುದಾಗಿ ಹೇಳಿ ಇಬ್ಬರು ಯುವಕರಿಂದ ಕಿಡ್ನಾಪ್ ಮಾಡಲಾಗಿದೆ. ಶಿವಮೊಗ್ಗ ಹೊರವಲಯದ ಕಲ್ಲುಗಂಗೂರು ಬಳಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋದ ಯುವಕರು ವಿದ್ಯಾರ್ಥಿಯ ಬಟ್ಟೆ ಬಿಚ್ಚಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಕಿವಿಗೆ ಕಚ್ಚಿ ಗಾಯ ಮಾಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಯನ್ನು ಯುವಕರು ಸ್ಥಳದಲ್ಲೇ ಬಿಟ್ಟು ಪರಾರಿ ಆಗಿದ್ದಾರೆ. ಸ್ಥಳೀಯರ ಸಹಾಯದಿಂದ ವಿದ್ಯಾರ್ಥಿಯನ್ನು ಆಸ್ಪತ್ರೆ ದಾಖಲು ಮಾಡಲಾಗಿದೆ. ಬಳಿಕ ಪೋಷಕರಿಗೆ ಘಟನೆ ಕುರಿತು ಮಾಹಿತಿ ನೀಡಲಾಗಿದೆ.
ಸದ್ಯ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿದ್ದು, ಘಟನೆ ನಡೆದು ಒಂದು ವಾರ ಆದರೂ ಆರೋಪಿಗಳು ಪತ್ತೆ ಆಗಿಲ್ಲ.
ಘಟನೆ ಕುರಿತು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಘಟನೆಯಿಂದ ವಿದ್ಯಾರ್ಥಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ತೊಂದರೆ ಉಂಟಾಗಿದೆ ಎನ್ನುತ್ತಾರೆ.