w
Headlines
Home » ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

GridArt 20241012 191314423.jpg

ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಶಿವಮೊಗ್ಗ ಜಿಲ್ಲೆಯ ಯಡವಾಲ ಸಮೀಪ ಕೊಂಡಜ್ಜಿ ಹಳ್ಳದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆಯಾಗಿದೆ.

ಚಿನ್ನಿಕಟ್ಟೆ ನಿವಾಸಿ ಇಕ್ಬಾಲ್(40) ಎಂಬ ವ್ಯಕ್ತಿ ಹಳ್ಳ ದಾಟುತ್ತಿದ್ದಾಗ ಬೈಕ್‌ ಸಮೇತ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದನು ಸ್ಥಳಕ್ಕೆ ಆಗಮಿಸಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಪತ್ತೆ ಕಾರ್ಯಾಚರಣೆ ಕೈಗೊಂಡಿದ್ದರು.ಇದೀಗ ಶವ ಪತ್ತೆಯಾಗಿದೆ. ಘಟನೆ ನಡೆದ ಸ್ಥಳದಿಂದ ತುಸು ದೂರದಲ್ಲಿ ಮೃತದೇಹ ಸಿಕ್ಕಿದೆ.

ಘಟನೆ ನಡೆದ ದಿನ ಸ್ಥಳಕ್ಕೆ ಸಂಸದ ಬಿ ವೈ ರಾಘವೇಂದ್ರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದರು

ಒಂದೇ ರಾತ್ರಿಯಲ್ಲಿ ಸುರಿದ ಮಳೆಯಿಂದಾಗಿ ಹಳ್ಳವು ತುಂಬಿ ಸೇತುವೆ ಮೇಲೆಯೆ ನೀರು ಹರಿಯುತ್ತಿತ್ತು.ಹಾಗಿದ್ದರೂ ಸೇತುವೆ ದಾಟಲು ಮುಂದಾಗಿದ್ದ ವೇಳೆ ಇಕ್ಬಾಲ್‌ ನೀರುಪಾಲಾಗಿ ಜೀವ ಕಳೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.