Headlines

ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

ಸಿಟಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬನಗರದ ಪಿ ಆಂಡ್ ಟಿ ಕಾಲೋನಿಯಲ್ಲಿ ನಡೆದಿದೆ.

ವಿರಭದ್ರೇಶ್ವರ ಹೆಸರಿನ ಸಿಟಿ ಬಸ್, ಬೊಮ್ಮನಕಟ್ಟೆ ಕಡೆಗೆ ಪ್ರಯಾಣಿಸುತ್ತಿತ್ತು. ಈ ವೇಳೆ ಪಿ ಆಂಡ್ ಟಿ ಕಾಲೋನಿಯಲ್ಲಿ ರಸ್ತೆ ತಿರುವಿನಲ್ಲಿ ಬಸ್ ಪಲ್ಟಿಯಾಗಿ ಬಿದ್ದಿದೆ.

ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ 20 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿನೋಬನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *