RIPPONPETE | ಮಳೆಯಿಂದ ಸ್ಥಗಿತಗೊಂಡಿದ್ದ ದ್ವಿಪಥ ರಸ್ತೆ ಕಾಮಗಾರಿ ಚಾಲನೆಗೆ ಸೂಚನೆ
ರಿಪ್ಪನ್‌ಪೇಟೆ : ಮಳೆಯಿಂದ ಸ್ಥಗಿತಗೊಂಡಿದ್ದ ಪಟ್ಟಣದ 5.13 ಕೋಟಿ ರೂ ವೆಚ್ಚದಲ್ಲಿ ಸಾಗರ – ತೀರ್ಥಹಳ್ಳಿ ರಸ್ತೆಯಲ್ಲಿ ದ್ವಿಪಥ ರಸ್ತೆ ಕಾಮಗಾರಿಯನ್ನು ಪುನರಾರಂಭಿಸುವ ಬಗ್ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆ ಮೇರೆಗೆ ಅಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.
ಸಾಗರ ರಸ್ತೆಯ ಎಪಿಎಂಸಿ ಯಿಂದ ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದವರೆಗೂ ದ್ವಿಪಥ ರಸ್ತೆ ಕಾಮಗಾರಿ ಈಗಾಗಲೇ 70% ಮುಕ್ತಾಯವಾಗಿದ್ದು ಮಳೆಯ ಕಾರಣ ಕಳೆದ ನಾಲ್ಕು ತಿಂಗಳಿಂದ ಕಾಮಗಾರಿ ಸ್ಥಗಿತಗೊಂಡಿತ್ತು.
ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆ ಮೇರೆಗೆ ಕಾಮಗಾರಿ ಪುನರಾರಂಭಿಸುವ ಕುರಿತು ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಅಧಿಕಾರಿಗಳೊಂದಿಗೆ ಪಟ್ಟಣಕ್ಕೆ ಭೇಟಿ ನೀಡಿ ಗುತ್ತಿಗೆದಾರರೊಂದಿಗೆ ಚರ್ಚಿಸಿ ಕಾಮಗಾರಿ ಪ್ರಾರಂಭಿಸುವಂತೆ ಸೂಚಿಸಿದ್ದಾರೆ.
ಈ ಸಂಧರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು , ಮೆಸ್ಕಾಂ ಇಲಾಖೆಯ ಅಧಿಕಾರಿಗಳು ,ಗ್ರಾಪಂ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ ಮುಖಂಡರಾದ ಆಸೀಫ಼್ ಭಾಷಾ , ರಮೇಶ್ ಫ್ಯಾನ್ಸಿ , ನಾಗಪ್ಪ , ಪಿಡಿಓ ಮಧುಸೂಧನ್ ಹಾಗೂ ಇನ್ನಿತರರಿದ್ದರು.