SSLC ಪರೀಕ್ಷೆ ಬರೆಯಲು ಪಿಕ್‌ಆಫ್‌ನಲ್ಲಿ ಬಂದ ಸರ್ಕಾರಿ ಶಾಲೆ ವಿದ್ಯಾರ್ಥಿಗಳು
ರಿಪ್ಪನ್‌ಪೇಟೆ;-ಇಂದಿನಿಂದ ರಾಜ್ಯವ್ಯಾಪ್ತಿ ಅರಂಭಗೊಂಡ ಎಸ್.ಎಸ್.ಎಲ್.ಸಿ.ವಾರ್ಷೀಕ ಪಬ್ಲಿಕ್ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಪಿಕ್‌ಆಪ್‌ನಲ್ಲಿ ತುಂಬಿಕೊಂಡು ಬಂದಿದ್ದು ಸಾರ್ವಜನಿಕರ ಮತ್ತು ಪೋಷಕರ ಅಸಮದಾನಕ್ಕೆ ಕಾರಣವಾಗಿದೆ.
ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್ ಮತ್ತು ಪ್ರೌಢಶಾಲೆಯಲ್ಲಿ ಎರಡು ಪರೀಕ್ಷಾ ಕೇಂದ್ರಗಳಿದ್ದು ಈ ಪರೀಕ್ಷಾ ಕೇಂದ್ರದ ವ್ಯಾಪ್ತಿಗೆ ಆರಸಾಳು,ಬೆಳ್ಳೂರು, ಹೆದ್ದಾರಿಪುರ,ಅಮೃತ,ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆಗಳು ಒಳಪಡುತ್ತಿದ್ದು ಖಾಸಗಿ ಶಾಲೆಗಳಾದ ಶ್ರೀಬಸವೇಶ್ವರ,ಶಾರದಾ ರಾಮಕೃಷ್ಣ ಮೇರಿಮಾತಾ ಮಲೆನಾಡು ಪ್ರೌಢಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬರಬೇಕಾಗಿದ್ದು ಸರ್ಕಾರ ವಿಶೇಷವಾಗಿ ಎಸ್.ಎಸ್.ಎಲ್.ಸಿ.ವಾರ್ಷೀಕ ಪಬ್ಲಿಕ್ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರಿ ಬಸ್ ವ್ಯವಸ್ಥೆಯೊಂದಿಗೆ ಉಚಿತ ಬಸ್ ಸಂಚಾರ ಕಲ್ಪಿಸಲಾಗಿದ್ದರೂ ಕೂಡಾ ಹಿಂದುಳಿದ ಹೊಸನಗರ ತಾಲ್ಲೂಕಿನ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಮಾತ್ರ ಈ ಸೌಲಭ್ಯದಿಂದ ವಂಚಿತಗೊಳಿಸಿದೆ ಎಂಬುದಕ್ಕೆ ಇಂದಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಪಿಕ್‌ಆಪ್‌ನಲ್ಲಿ ಬಂದಿರುವುದೇ ಸಾಕ್ಷಿಯಾಗಿದೆ.
ಪಿಕ್ ಅಫ್‌ನಲ್ಲಿ ಸುಮಾರು ಇಪ್ಪತ್ತರಿಂದ ಮೂವತ್ತು ವಿದ್ಯಾರ್ಥಿ ಗಳನ್ನು ತುಂಬಿಕೊಂಡು ಹೋಗುತ್ತಿದ್ದನ್ನು ಕಂಡ ತಕ್ಷಣ ಮಾಧ್ಯಮ ಪ್ರತಿನಿಧಿಯೊಬ್ಬರು ಇಲ್ಲಿನ ವಿನಾಯಕ ವೃತ್ತದಲ್ಲಿ ಮೊಬೈಲ್‌ನಲ್ಲಿ ಸೆರೆಹಿಡಿದು ಪೇಸ್ ಬುಕ್ಕಿಗೆ ಅಪ್ ಲೋಡ್ ಮಾಡಿ ಬಿಟ್ಟಿರುವುದು ಸಾಕಷ್ಟು ವೈರಲ್ ಅಗಿದೆ.ಅಕಸ್ಮಿಕವಾಗಿ ಏನಾದರೂ ಅವಘಡ ಸಂಭವಿಸಿದರೆ ಯಾರು ಹೊಣೆ ಎಂಬ ಚಿಂತೆ ಪೋಷಕರಲ್ಲಿ ಕಾಡುವಂತಾಗಿದೆ.