Headlines

SSLC ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

SSLC ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ


ಸಾಗರ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಗ್ರಾಮದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ನಡೆದಿದೆ.

ಆನಂದಪುರದ ಸರ್ಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದ್ದ ವಿದ್ಯಾರ್ಥಿ ಪರಶುರಾಮ್ ನೇಣಿಗೆ ಶರಣಾದ ದುರ್ದೈವಿ.

ಮನೆಯ ಹಿತ್ತಲಿನ ಕಂಬಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

About The Author

Leave a Reply

Your email address will not be published. Required fields are marked *