5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ಕುರಿತು ಹೈಕೋರ್ಟ್ ಮಹತ್ವದ ಆದೇಶ.!
ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಅನುಮತಿ ನೀಡಿದೆ.
ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ ಹೈಕೋರ್ಟ್ ಏಕ ಸದಸ್ಯ ಪೀಠದ ತೀರ್ಪನ್ನು ವಿಭಾಗೀಯ ಪೀಠ ರದ್ದುಪಡಿಸಿದೆ.
ರಾಜ್ಯ ಸರ್ಕಾರವು ಬೋರ್ಡ್ ಪರೀಕ್ಷೆಯನ್ನು ನಡೆಸಬಹುದು ಎಂದು ತಿಳಿಸಿದೆ. ಪರೀಕ್ಷೆ ಪ್ರಕ್ರಿಯೆ ಸ್ಥಗಿತಗೊಂಡ ಹಂತದಿಂದಲೇ ಮುಂದುವರಿಸಬೇಕು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆ ನಡೆಸಲು ಸಂಬಂಧಪಟ್ಟವರೊಂದಿಗೆ ಸಮಾಲೋಚಿಸಬೇಕು ಎಂದು ಸರ್ಕಾರಕ್ಕೆ ಆದೇಶ ನೀಡಿದೆ.
ಈ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ರುಪ್ಸಾ ಹಾಗೂ ಅವರ್ಸ್ ಸ್ಕೂಲ್ ಸಲ್ಲಿಸಿದ ಮನವಿಯನ್ನೂ ಇದೇ ವೇಳೆ ತಿರಸ್ಕರಿಸಿದ ವಿಭಾಗೀಯ ಪೀಠ, ತಡೆಯಾಜ್ಞೆಯನ್ನು ಸುಪ್ರೀಂಕೋರ್ಟ್’ನಲ್ಲಿಯೇ ಕೋರುವಂತೆ ಸೂಚಿಸಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್