Headlines

ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA)

Screenshot 20241106 215012 Chrome.jpg

ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA)

25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಕಸಬಾ ಹೋಬಳಿ ಗ್ರಾಮ ಲೆಕ್ಕಿಗ ಸಂಜಯ್ ಮೋಹಿತೆ ಬಲೆಗೆ ಬಿದ್ದವರು.

ಪೌತಿ ಖಾತೆ ಮಾಡಿಕೊಡಲು ಕಿರಣ್ ಎಂಬುವರಿಂದ 25 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಕಿರಣ್ ಅವರ ಅಜ್ಜ ಮರಣ ಹೊಂದಿದ್ದು, ಅವರ ಹೆಸರಿನಲ್ಲಿರುವ 2 ಎಕರೆ ಜಮೀನನ್ನು ಅಜ್ಜಿಯ ಹೆಸರಿಗೆ ಪೌತಿ ಖಾತೆ ಮಾಡಿಕೊಡಲು ತಾಲೂಕು ಕಚೇರಿಗೆ ಅರ್ಜಿ ಸಲ್ಲಿಸಿದ್ದು, ಇದರ ಬಗ್ಗೆ ವಿಚಾರಿಸಲು ಸಂಜಯ್ ಮೋಹಿತೆ ಅವರನ್ನು ಭೇಟಿಯಾಗಿದ್ದಾರೆ.

ಅವರು ಪೌತಿ ಖಾತೆ ಮಾಡಿಕೊಡಲು 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಕಿರಣ್ ದೂರು ನೀಡಿದ್ದು, ಸಂಜೆ ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ದಾಳಿ ಮಾಡಿ ಹಣದ ಸಮೇತ ಅವರನ್ನು ವಶಕ್ಕೆ ಪಡೆಯಲಾಗಿದೆ.

Leave a Reply

Your email address will not be published. Required fields are marked *