ಹೊಸನಗರದಲ್ಲಿ ಯುವರತ್ನ ಪುನೀತ್ ರಾಜ್ಕುಮಾರ್ 49ನೇ ಹುಟ್ಟು ಹಬ್ಬ ಹಾಗೂ RCB ವಿಜಯೋತ್ಸವ ಆಚರಣೆ
ಹೊಸನಗರ : ಪಟ್ಟಣದ ಗೇರುಪುರದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಸ್ಯಾಂಡಲ್ ವುಡ್ ನ ಯುವರತ್ನ ಡಾಕ್ಟರ್ ಪುನೀತ್ ರಾಜಕುಮಾರ್ ಅವರ 49ನೇ ಹುಟ್ಟುಹಬ್ಬವನ್ನು ಪಟ್ಟಣದ ಡಾಕ್ಟರ್ ಪುನೀತ್ ರಾಜಕುಮಾರ್ ಅಭಿಮಾನಿ ಬಳಗದವರು ಸಂಭ್ರಮ ಸಡಗರದಿಂದ ಆಚರಿಸಿದರು.
ಪ್ರಪಂಚದ ಕಲಾಭಿಮಾನಿಗಳ ಕಣ್ಮಣಿ ಪುನೀತ್ ರಾಜಕುಮಾರ್ ಇಲ್ಲದೆ ಆಚರಿಸುತ್ತಿರುವ ಮೂರನೇ ಹುಟ್ಟುಹಬ್ಬ ಇದಾಗಿದ್ದು ಈ ಸಂದರ್ಭದಲ್ಲಿ ಪುನೀತ್ ರವರ ಸವಿನೆನಪಿಗಾಗಿ ಪೌರ ಕಾರ್ಮಿಕ ನಾಗರಾಜರವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು ಹಾಗೂ ಶಾಲಾ ಮಕ್ಕಳಿಗೆ ಪೆನ್ನು ಹಾಗು ಕೇಕ್ ವಿತರಿಸುವ ಮೂಲಕ ಮತ್ತು ಈ ದಿನವನ್ನು ಸ್ಪೂರ್ತಿಯ ಹಬ್ಬವಾಗಿ ಆಚರಿಸುವ ಪ್ರತಿಜ್ಞೆ ಕೈಗೊಳ್ಳಲಾಯಿತು.
ಡಾಕ್ಟರ್ ಪುನೀತ್ ರಾಜಕುಮಾರ್ ಅವರ ಅಭಿಮಾನದ ಕಾಣದಂತೆ ಮಾಯವಾದನು ಹಾಗೂ ನಗುತಾ ನಗುತಾ ಹಾಡುಗಳಿಗೆ ಹೆಜ್ಜೆ ಹಾಕುವ ಮೂಲಕ ಶಾಲಾ ಮಕ್ಕಳು ಹುಟ್ಟುಹಬ್ಬ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಫೈನಲ್ ಪಂದ್ಯದಲ್ಲಿ ಆರ್ ಸಿಬಿ ಮಹಿಳಾ ತಂಡ ಎಂಟು ವಿಕೆಟ್ ಜಯಗಳಿಸಿದ ಬಗ್ಗೆ ಕುಣಿದು ಕುಪ್ಪಳಿಸಿದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್