Headlines

ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆ – ನದಿಗೆ ಹಾರಿರುವ ಶಂಕೆ – union bank manager missing

ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆ – ನದಿಗೆ ಹಾರಿರುವ ಶಂಕೆ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ವ್ಯಕ್ತಿಯೊಬ್ಬರು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು ಮೊಬೈಲ್ ಆಧಾರದಲ್ಲಿ ಅವರು ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಎಂದು ತಿಳಿದು ಬಂದಿದೆ.

ತೀರ್ಥಹಳ್ಳಿ ತಾಲೂಕಿನ ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಾಪತ್ತೆಯಾಗಿದ್ದು ತುಂಗಾ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ತುಂಗಾ ನದಿಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು  ಹುಡುಕಾಟ ನಡೆಸುತ್ತಿದ್ದಾರೆ.

ಬ್ಯಾಂಕ್ ಮ್ಯಾನೇಜರ್ ನ ಸಂಬಂಧಿಕರು ಚೆನ್ನೈ ನಲ್ಲಿಇದ್ದಾರೆ ಎಂದು ಹೇಳಲಾಗುತ್ತಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

union bank manager missing