Headlines

ಸಾಮಾಜಿಕ ಜಾಲತಾಣದಲ್ಲಿ ಸಚಿವ ಮಧು ಬಂಗಾರಪ್ಪ ವಿರುದ್ದ ಅವಾಚ್ಯವಾಗಿ ನಿಂದನೆ – ದೂರು ದಾಖಲು

ಸಾಮಾಜಿಕ ಜಾಲತಾಣದಲ್ಲಿ ಸಚಿವ ಮಧು ಬಂಗಾರಪ್ಪರನ್ನು ಅವಾಚ್ಯವಾಗಿ ನಿಂದನೆ – ದೂರು ದಾಖಲು

ಶಿವಮೊಗ್ಗ : ಸಾಮಾಜಿಕ ಮಾಧ್ಯಮ ಎಕ್ಸ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಯ ವಿರುದ್ಧ ವಿನೋಬನಗರ ಠಾಣೆ ಪೊಲೀಸರು ಸುಮೋಟೋ ದೂರು ದಾಖಲಿಸಿಕೊಂಡಿದ್ದಾರೆ.

ಮೋಹಿತ್ ನರಸಿಂಹ ಮೂರ್ತಿ ಎಂಬುವರ ವಿರುದ್ಧ ದೂರು ದಾಖಲಾಗಿದೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮಾಡಲು ನಿಮ್ಮಪ್ಪನ ಮನೆ ದುಡ್ಡಲ್ಲಿ ಏನಾದ್ರು ಅವರಿಗೆ ಶಿಕ್ಷಣ ಕೊಡ್ತಿರಿ? ನೀನು ಐಷಾರಾಮಿ ಜೀವನ ನಡೆಸುತ್ತಿರುವುದು ಸಾರ್ವಜನಿಕರ ದುಡ್ಡು ಲೂಟಿ ಮಾಡಿ ಅನ್ನೋದು ಸಾಮಾನ್ಯ ಪರಿಜ್ಞಾನ ಇರ್ಲಿ. ಸಾರ್ವಜನಿಕರ ದುಡ್ಡಲಿ ದರ್ಪ ಮಾಡುತ್ತೀಯನೋ, ಸಾರ್ವಜನಿಕರು ದುಡ್ಡಲಿ ಬದುಕುತ್ತಿದ್ದೀಯ ನಿಮ್ಮಪ್ಪನ ಮನೆ ದುಡ್ಡಲಿ ಅಲ್ಲ ಏನೋ ನಿನ್ನ ದರ್ಪ ನೀನು ನಿನ್ನ ಕುಟುಂಬದವರು ಐಷಾರಾಮಿ ಜೀವನ ನಡೆಸುತ್ತಿರುವುದು ಸಾರ್ವಜನಿಕರ ದುಡ್ಡಲ್ಲಿ. ಲೂಟಿ ಮಾಡಿ ನೀವು ಮಾಜಾ ಮಾಡಿಕೊಂಡು ಸಾರ್ವಜನಿಕರ ಮೇಲೆ ದರ್ಪ ತೋರುಯನೋ? ನೀನೇದಾರು ನಿಮ್ಮಪ್ಪನ ಮನೆಯಿಂದ ತಂದುಕೊಟ್ಟು ಸಾರ್ವಜನಿಕರಿಗೆ ಸೇವೆ ಮಾಡಿದ್ದರೇ ಏನೋ ನಿಂದು ದರ್ಪಲೇ? ಸಾರ್ವಜನಿಕರ ಸೇವೆ ಮಾಡೋಕೆ ಯೋಗ್ಯತೆ ಇಲ್ಲ, ಅಂದರೆ ರಾಜಿನಾಮೆಕೊಟ್ಟು ಹೋಗಿ ಮಜಾ ಮಾಡಲೆ ಮನೇಲಿ. ದರ್ಪ ತೋರಿಸುತ್ತೀಯ ಮೆಟ್ ಮೆಟ್ ನಲ್ಲಿ,, ಹೊಡಿತಾರೆ ರೋಡಲಿ, ಯಾರ ಮೇಲೂ ದರ್ಪ ತೋರಿಸೋದು ಸಾರ್ವಜನಿಕರ ಪರಿಶ್ರಮದಿಂದ ನೀವು ಕೂತುಕೊಂಡಿರೋದು ಅಧಿಕಾರದಲ್ಲಿ ನೆನಪಿರಲಿ. ಸಾರ್ವಜನಿಕರ ಆಸ್ತಿ ಲೂಟಿ ಮಾಡುವುದು ಪುನಃ ಸಾರ್ವಜನಿಕರ ಮೇಲೆ ದರ್ಪ ತೋರಿಸುವುದು ಎನ್ ನಿಮ್ಮಪ್ಪನ ಮನೆಯಿಂದ ತಂದುಕೊಡುತ್ತೀಯೇನೋ? ದೌರ್ಜನ್ಯ ಮಾಡಿರುವ ವಿದ್ಯಾರ್ಥಿಗಳಿಗೆ ಕ್ಷಮೆ ಕೇಳು ಇಲ್ಲಾಂದರೆ ಮೆಟ್ ಮೆಟ್ ಹರಿತಾವ” ಎಂದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ.

ಆರೋಪಿ ಮೋಹಿತ್ ನರಸಿಂಹ ಮೂರ್ತಿ ಸಚಿವರ ವಿರುದ್ಧ ಅವಾಚ್ಯವಾಗಿ ನಿಂದಿಸಿ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಾದ ಎಕ್ಸ್​​ ಮತ್ತು ಇನ್​​ಸ್ಟಾಗ್ರಾಮ್​​ನಲ್ಲಿ ಪೋಸ್ಟ್​ ಹಾಕಿದ್ದಾನೆ ಎಂದು ದೂರಿನಲ್ಲಿ ದಾಖಲಾಗಿದೆ.

ಈ ಸಂಬಂಧ ಆರೋಪಿ ಮೋಹಿತ್ ನರಸಿಂಹ ಮೂರ್ತಿ ವಿರುದ್ಧ ಪೊಲೀಸರು ರಾಜ್ಯ ಸರ್ಕಾರದ ಸಚಿವರನ್ನು ಹಾಗೂ ಸಂವಿಧಾನಾತ್ಮಕ ಹುದ್ದೆಯಲ್ಲಿರುವ ವ್ಯಕ್ತಿಯನ್ನು ಉದ್ದೇಶಿಸಿ, ಏಕವಚನದಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ. ಮತ್ತು ಸರ್ಕಾರದ ಘನತೆಗೆ ಧಕ್ಕೆ ತರುವಂತಹ, ಸರ್ಕಾರದ ಯೋಜನೆಯ ವಿರುದ್ಧವಾಗಿ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿ, ಸಾರ್ವಜನಿಕರನ್ನು ಉದ್ರೇಕಿಸಿ ಸರ್ಕಾರದ ವಿರುದ್ಧ ದಂಗೆ ಏಳಿಸುವ ಹಾಗೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *