ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…
ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 03/12/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.
ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಡಿ. 03 ರಂದು ಬೆಳಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 110/11 ಕೆ.ವಿ. ಎಮ್.ಯು.ಎಸ್.ಎಸ್. ರಿಪ್ಪನ್‌ಪೇಟೆಯಲ್ಲಿ ತುರ್ತು ನಿರ್ವಹಣೆ ಮತ್ತು ಹೆಚ್ಚುವರಿ ಫೀಡರ್ ನಿರ್ಮಾಣ ಕಾಮಗಾರಿ ಪ್ರಯುಕ್ತ ವಿದ್ಯುತ್ ಸರಬರಾಜು ಇರುವುದಿಲ್ಲ…
ರಿಪ್ಪನ್‌ಪೇಟೆ ಶಾಖಾ ವ್ಯಾಪ್ತಿಯ ರಿಪ್ಪನ್‌ಪೇಟೆ, ಹೆದ್ದಾರಿಪುರ, ಕೆಂಚನಾಲ, ಅಮೃತ (ಗರ್ತಿಕೆರೆ), ಹುಂಚ, ಬೆಳ್ಳೂರು, ಬಾಳೂರು, ಅರಸಾಳು, ಕೋಡೂರು, ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವದಿಲ್ಲ. ಆದ್ದರಿಂದ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ಕೋರಿದೆ.