ಮಾವಿನ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ಶಿವಮೊಗ್ಗ:ಬೊಮ್ಮನಕಟ್ಟೆಯ ಗರಡಿ ಮನೆ ಬಳಿಯಿರುವ ತೋಟದಲ್ಲಿನ ಮಾವಿನ ಮರಕ್ಕೆ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದೊಂದು ಆತ್ಮಹತ್ಯೆ ಪ್ರಕರಣವೆಂದು ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳವಾರ ಬೆಳಿಗ್ಗೆ ೬-೩೦ ಕ್ಕೆ ವಾಕಿಂಗ್‌ಗೆ ತೆರಳಿದ್ದ ಮಹಿಳೆ ಹೇಮಾವತಿ (೫೦) ತಮ್ಮ ತೋಟದಲ್ಲಿಯೇ ಮಾವಿನ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಬೊಮ್ಮನಕಟ್ಟೆಯಲ್ಲಿ ಪತಿ ದೇವೇಂದ್ರಪ್ಪ ಮತ್ತು ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದ ಹೇಮಾವತಿ ಪ್ರತಿನಿತ್ಯ ಮನೆಯ ಹಿಂಭಾಗದಲ್ಲಿರುವ ತೋಟಕ್ಕೆ ತೆರಳಿ ವಾಕಿಂಗ್ ಮಾಡಿಕೊಂಡು ವಾಪಾಸ್ ಆಗುತ್ತಿದ್ದರು. ಆದರೆ ಇಂದು ವಾಕಿಂಗ್ ಗೆ ಹೋದವರು ವಾಪಾಸಾಗಿರಲಿಲ್ಲ. ನಿಗದಿತ ಸಮಯಕ್ಕೆ ಮನೆಗೆ ವಾಪಾಸ್ ಆಗದ ಹೇಮಾವತಿಯನ್ನ ಹುಡುಕಿಕೊಂಡು ಹೋರಟ ಪತಿ ದೇವೇಂದ್ರಪ್ಪನವರಿಗೆ ಬೆಳಿಗ್ಗೆ ೯-೩೦ ಕ್ಕೆ ಅವರದೆ ತೋಟದ ಮಾವಿನ ಮರದಲ್ಲಿ ಪತ್ನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಂತರ ಅವರ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಸಾಗಿಸಲಾಯಿತು. ಪ್ರಕರಣ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಅಸ್ವಭಾವಿಕ ಸಾವು ಎಂದು ದಾಖಲಾಗಿದೆ.