ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ
ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.
ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಒಂದು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದ್ದು ಇನ್ನೊಂದು ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.
ರಿಪ್ಪನ್‌ಪೇಟೆ ಪೊಲೀಸರು ಸ್ಥಳಕ್ಕೆ ತೆರಳಿ ಮುಂದಿನ ಕ್ರಮ ಕೈಗೊಂಡಿದ್ದಾರೆ.