ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಗಾನಕೋಗಿಲೆ ಪ್ರಣತಿ ಅಣ್ಣಪ್ಪ
ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಗಾನಕೋಗಿಲೆ ಪ್ರಣತಿ ಅಣ್ಣಪ್ಪ ಇಂದು ರಾಮನಗರದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಭಾಗಿಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾವ ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣತಿ ಅಣ್ಣಪ್ಪ ಭಾವಗೀತೆಯಲ್ಲಿ ವಿಭಾಗಿಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಳ್ಳುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಿಪ್ಪನ್‌ಪೇಟೆ ಹಳೇ ಸಂತೆ ಮಾರ್ಕೆಟ್ ರಸ್ತೆಯ ನಿವಾಸಿಗಳಾದ ಅಣ್ಣಪ್ಪ ಹಾಗೂ ಮಹಾಲಕ್ಷ್ಮಿ ದಂಪತಿಗಳ ಪುತ್ರಿ ಪ್ರಣತಿ ಅಣ್ಣಪ್ಪ ಈಗಾಗಲೇ ಹಲವಾರು ಗಾಯನ ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ಸಂಗೀತಪ್ರೀಯರ ಮೆಚ್ಚುಗೆ ಗಳಿಸಿದ್ದಾರೆ.
ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಕಾಲೇಜಿಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದ ವಿದ್ಯಾರ್ಥಿನಿ ಕು. ಪ್ರಣತಿ ಅಣ್ಣಪ್ಪಳಿಗೆ ಕಾಲೇಜಿನ ಪ್ರಾಚಾರ್ಯರಾದ ವಾಸುದೇವ. ಕೆ. ಹೆಚ್ . ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಜಿ ಆರ್ ಗೋಪಾಲಕೃಷ್ಣ, ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರುಗಳು. ಉಪನ್ಯಾಸಕರು ಸಿಬ್ಬಂದಿ ವರ್ಗದವರು ಮತ್ತು ಗ್ರಾಮಸ್ಥರು ಅಭಿನಂದಿಸಿದ್ದಾರೆ.