ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವಲ್ಲಿ ರಾಮಕೃಷ್ಣ ವಿದ್ಯಾಲಯ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ
ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವುದರೊಂದಿಗೆ , ಕ್ರೀಡಾ ಕ್ಷೇತ್ರ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಲು ರಾಮಕೃಷ್ಣ ವಿದ್ಯಾಲಯ ಸಹಕಾರಿಯಾಗಿದೆ ಎಂದು ಸಾಗರ, ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕೈಗಾರಿಕಾ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.
ಪಟ್ಟಣದ ಶಾರದಾ ರಾಮಕೃಷ್ಣ ವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಮಕೃಷ್ಣ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮವಾದ ಸಂಸ್ಕಾರವನ್ನು ಪಡೆಯುತ್ತಾರೆ,ಈ ಸಂಸ್ಥೆಯಲ್ಲಿ ಓದಿದ ಅನೇಕ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿರುವುದು ಸಂತಸ ತರುತ್ತದೆ ಎಂದರು.
ಮಕ್ಕಳಿಗೆ ಶಿಕ್ಷಣದ ಚಟುವಟಿಕೆಗಳು ಹಾಗೂ ಕ್ರೀಡಾಕೂಟದ ಬಗ್ಗೆ ಆಸಕ್ತಿಯನ್ನು ಮೂಡಿಸಬೇಕು. ಇಂದಿನ ಮಕ್ಕಳು ಮಾನಸಿಕವಾಗಿ ದೈಹಿಕವಾಗಿ ದೃಢತೆಯನ್ನು ಹೊಂದಬೇಕಾದರೆ ಪುಟಾಣಿ ಮಕ್ಕಳ ಕ್ರೀಡಾ ಚಟುವಟಿಕೆಗಳ ಬಗ್ಗೆ ಆಸಕ್ತಿಯನ್ನು ಮೂಡಿಸಬೇಕು. ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು, ಇಂದು ಬಡ ಹಾಗೂ ಶ್ರೀಮಂತರು ಎಂಬ ಭೇದಭಾವವಿಲ್ಲದೆ ಉತ್ತಮ ಶಿಕ್ಷಣದ ಸೌಲಭ್ಯ ದೊರೆಯುತ್ತಿದೆ. ಎಲ್ಲಾ ಪೋಷಕರು ಹಾಗೂ ಸಮಾಜದಲ್ಲಿ ನಾನ್ ನಾಗರಿಕರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು. ಇವರುಗಳಿಗೆ ಪ್ರತಿಭೆ ಇದೆ ಅವಕಾಶಗಳಿಲ್ಲ. ಇವರುಗಳಿಗೆ ಶೈಕ್ಷಣಿಕ ಚಟುವಟಿಕೆಗಳ ಕುರಿತು ಅರಿವು ಮೂಡಿಸಿದರೆ ಉನ್ನತ ಹಂತದ ಶಿಕ್ಷಣವನ್ನು ಪಡೆದು ಸಮಾಜದ ಮುಖ್ಯ ವಾಹಿನಿಗೆ ಬಂದು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದರು.
ಕಾರ್ಯಕ್ರಮದ ಸಾನಿಧ್ಯವನ್ನು ಮಳಲಿ ಮಠದ ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿದ್ದರು.
ಈ ಸಂಧರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ದನಲಕ್ಷ್ಮಿ , ಜಿಪಂ ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರ್ , ಕೆಡಿಪಿ ಸದಸ್ಯರಾದ ಚಂದ್ರೇಶ್ ಎನ್ , ಆಸೀಫ಼್ ಭಾಷಾ ಗ್ರಾಪಂ ಸದಸ್ಯರಾದ ಸುಂದರೇಶ್ , ನಿರೂಪ್ ಕುಮಾರ್ , ಸಾರಾಭಿ ಹೈದರ್ , ಗಣಪತಿ ಗವಟೂರು ,ಪಿಎಸ್‌ಐ ಪ್ರವೀಣ್ ಎಸ್ ಪಿ ,ಶಿಕ್ಷಕರ ಸಂಘದ ಉಪಾಧ್ಯಕ್ಷ ಶಿವಮೂರ್ತಿ ,ಸರಿತಾ ದೇವರಾಜ್ ಹಾಗೂ ಇನ್ನಿತರರಿದ್ದರು.