ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರು ಸಾವು
ಶಿವಮೊಗ್ಗ : ಬೈಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ನಡೆದಿದೆ.
ನಗರದ ಪ್ರವಾಸಿ ಮಂದಿರದ ವೃತ್ತದ ಬಳಿಯ ಈಡಿಗರ ಭವನ ರಸ್ತೆಯ ತಿರುವಿನಲ್ಲಿ ಅಪಘಾತ ನಡೆದಿದೆ.
ಘಟನೆಯಲ್ಲಿ ಸೊರಬ ತಾಲೂಕು ಬೆಣ್ಣೆಗೆರೆ ನಿವಾಸಿ ರೋಹಿತ್ (26) ಹಾಗೂ ಹಾವೇರಿ ಜಿಲ್ಲೆ ಮಲೆಬೆನ್ನೂರು ತಾಲೂಕು ಬೇವಿನಹಳ್ಳಿ ಗ್ರಾಮದ ಜೀವನ್ (20) ಸಾವನ್ನಪ್ಪಿದ್ದಾರೆ.
ರೋಹಿತ್ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದು, ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದರು. ಜೀವನ್ ಇಂಜಿನಿಯರಿಂಗ್ ದ್ವಿತೀಯ ವರ್ಷದಲ್ಲಿ ಓದುತ್ತಿದ್ದರು.
ಅಪಘಾತದಲ್ಲಿ ರೋಹಿತ್ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಜೀವನ್ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾರೆ.
ಈ ಕುರಿತು ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.