ರಿಪ್ಪನ್ಪೇಟೆ ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ | Ripponpete police
ರಿಪ್ಪನ್ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮನೆ ಕಳ್ಳತನವಾಗುತ್ತಿರುವ ಹಿನ್ನಲೆಯಲ್ಲಿ ಪಟ್ಟಣದ ಪಿಎಸ್ಐ ಪ್ರವೀಣ್ ಎಸ್ ಪಿ ಮಹತ್ವದ ಪ್ರಕಟಣೆಯನ್ನು ಹೊರಡಿಸಿದ್ದಾರೆ.
ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚಾಗಿ ಮನೆ ಕಳ್ಳತನ ಪ್ರಕರಣಗಳು ಹಾಗೂ ದೇವಸ್ಥಾನ ಕಳ್ಳತನ ಪ್ರಕರಣಗಳು ಸಂಭವಿಸುತ್ತಿದ್ದು ಅದರಲ್ಲೂ ಹೆಚ್ಚಾಗಿ ಒಂಟಿ ಮನೆಗಳು ಮತ್ತು ಮುಖ್ಯರಸ್ತೆಗೆ ಹೊಂದಿಕೊಂಡಂತಹ ಬೀಗ ಹಾಕಿದ ಮನೆಗಳಲ್ಲಿ ಕಳ್ಳತನವಾಗುತ್ತಿದ್ದು ಆದ್ದರಿಂದ ತಮ್ಮಮನೆಗಳಲ್ಲಿ ಹಣ ಆಭರಣ ಹಾಗೂ ಬೆಲೆಬಾಳುವ ವಸ್ತುಗಳನ್ನು ಮನೆಯಲ್ಲಿ ಇಟ್ಟು ಹೋಗದೆ ಬ್ಯಾಂಕ್ ಲಾಕರ್ ನಲ್ಲಿ ಇರಿಸುವುದು ಹಾಗೂ ಕಾಲ ಕಾಲಕ್ಕೆ ದೇವಸ್ಥಾನದ ಹುಂಡಿ ಹಣವನ್ನು ತೆಗೆಯುವುದು ಮುನ್ನೆಚ್ಚರಿಕೆ ಕ್ರಮವಾಗಿ ಸಿಸಿ ಕ್ಯಾಮರಾ ಅಳವಡಿಕೆ ಮತ್ತು ಮನೆಯ ಸುತ್ತಮುತ್ತಲು ಬೆಳಕಿನ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದ್ದಾರೆ.
ಗ್ರಾಮದಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ರಿಪ್ಪನ್ಪೇಟೆ ಪೊಲೀಸ್ ಠಾಣೆಗೆ ಅಥವಾ 112 ಸಹಾಯವಾಣಿಗೆ ಕರೆಮಾಡಿ ತಿಳಿಸಲು ಸೂಚಿಸಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್