w
Headlines
Home » Anandapura | ಕಾರು- ಬಸ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

Anandapura | ಕಾರು- ಬಸ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

Screenshot 20241229 191818 WhatsApp.jpg

Anandapura | ಕಾರು- ಬಸ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗ:   ಸಾಗರ ತಾಲ್ಲೂಕು ಆನಂದಪುರ ಸಮೀಪದ ಇವತ್ತು ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಖಾಸಗಿ ಬಸ್‌ ಹಾಗೂ ಕಾರು ನಡುವಿನ ಡಿಕ್ಕಿಯಲ್ಲಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾರೆ.

ಮೃತರನ್ನ ದೊಡ್ಡಬಳ್ಳಾಪುರದ ಮೂಲದವರು ಎನ್ನಲಾಗಿದ್ದು, ಅಕ್ಷಯ್‌ ಹಾಗೂ ಶರಣ್‌ ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗಕ್ಕೆ ಪ್ರವಾಸಕ್ಕೆಂದು ಬಂದಿದ್ದರು.

ಇಲ್ಲಿನ ಮುರುಘಾಮಠದ ಸಮೀಪ ಇವತ್ತು ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಎರಟಿಗಾ ಕಾರು ಧರ್ಮಸ್ಥಳಕ್ಕೆ ಹೋಗುವ ಖಾಸಗಿ ಬಸ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಕಾರಿನ ಮುಂಭಾಗ ಪೂರ್ತಿ ಪುಡಿಪುಡಿಯಾಗಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆ ಬೆನ್ನಲ್ಲೆ ಸ್ಥಳಕ್ಕೆ ಆನಂದಪುರ ಪೊಲೀಸ್‌ ಠಾಣೆ ಪೊಲೀಸರು ಧಾವಿಸಿ ತನಿಖೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.