w
Headlines
Home » Hosanagara | ಟಿಪ್ಪರ್ ಲಾರಿ ಹಾಗೂ ಓಮಿನಿ ಕಾರಿನ ನಡುವೆ ಭೀಕರ ಅಪಘಾತ – ಹಲವರು ಗಂಭೀರ

Hosanagara | ಟಿಪ್ಪರ್ ಲಾರಿ ಹಾಗೂ ಓಮಿನಿ ಕಾರಿನ ನಡುವೆ ಭೀಕರ ಅಪಘಾತ – ಹಲವರು ಗಂಭೀರ

Hosanagara | ಟಿಪ್ಪರ್ ಲಾರಿ ಹಾಗೂ ಓಮಿನಿ ಕಾರಿನ ನಡುವೆ ಭೀಕರ ಅಪಘಾತ – ಹಲವರು ಗಂಭೀರ


ಹೊಸನಗರ : ಮಾರುತಿ ಓಮಿನಿ‌ ಕಾರು ಹಾಗೂ ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತವಾದ ಘಟನೆ ಕರಿನಗೊಳ್ಳಿ ಸಮೀಪದಲ್ಲಿ ನಡೆದಿದೆ.


ಕಾರಿನಲ್ಲಿದ್ದ 4 ಮಕ್ಕಳು ಸೇರಿದಂತೆ ಏಳು ಜನರಿಗೆ ಗಂಭೀರ ಗಾಯಗಳಾಗಿದೆ ಎನ್ನಲಾಗುತ್ತಿದೆ.

ಎಂ. ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ನ ಮುಂಭಾಗದಲ್ಲಿ ಹೊಸನಗರದಿಂದ ಶಿವಮೊಗ್ಗ ಕಡೆಗೆ ಹೋಗುತಿದ್ದ ಮಾರುತಿ ಓಮ್ನಿ ಕಾರು ಹಾಗೂ ಶಿವಮೊಗ್ಗ ಕಡೆಯಿಂದ ಹೊಸನಗರ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.


ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಚಾಲಕನನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು.

ಗಾಯಾಳುಗಳನ್ನು ಹೊಸನಗರ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಮತ್ತು ಶಿವಮೊಗ್ಗ ಮೆಗಾನ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. 


ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.