ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಅಪಘಾತ – ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವು
ಶಿವಮೊಗ್ಗ: ಬಾರಂದೂರು ಕ್ರಾಸ್ ಬಳಿ ಸಂಭವಿಸಿದ ಅಪಘಾತವೊಂದರಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಟ್ರ್ಯಾಕ್ಟರ್ ಹಾಗೂ ಕಾರು ನಡುವೆ ಡಿಕ್ಕಿಯಾದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಅವರನ್ನು ತರೀಕೆರೆಯ ಅಮೃತಾಪುರ ಮೂಲದವರು ಎನ್ನಲಾಗುತ್ತಿದ್ದು, ಕೃತಿ ಎಂದು ಗುರುತಿಸಲಾಗಿದೆ.
ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ MBBS ಓದುತ್ತಿದ್ದರು ಎಂದು ತಿಳಿದುಬಂದಿದೆ.
ಇವರು ತರೀಕೆರೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಹಾಗೂ ಟ್ರಾಕ್ಟರ್ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಟ್ರ್ಯಾಕ್ಟರ್ ರಸ್ತೆಯಲ್ಲಿಯೇ ಪಲ್ಟಿಯಾಗಿದೆ.
ಪೇಪರ್ ಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಈ ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ.

