Headlines

Ripponpete | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ

Ripponpete | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ


ರಿಪ್ಪನ್‌ಪೇಟೆ : ಶಾಸಕ ಬೇಳೂರು ಗೋಪಾಲಕೃಷ್ಣ ರವರ ಹುಟ್ಟುಹಬ್ಬವನ್ನು ಪಟ್ಟಣದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವೈಶಿಷ್ಟ್ಯ ಪೂರ್ಣವಾಗಿ ಆಚರಿಸಿದರು.

ಪಟ್ಟಣದ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಪಕ್ಷದ ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.


ನಂತರ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ತೆರಳಿ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಜೊತೆಗೆ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಹುಟ್ಟುಹಬ್ಬವನ್ನು ಅರ್ಥ ಪೂರ್ಣವಾಗಿ ಆಚರಿಸಿದರು.

ಈ ಸಂಧರ್ಭದಲ್ಲಿ ಕಾಂಗ್ರೆಸ್ ಘಟಕದ ಅಧ್ಯಕ್ಷ ಗಣಪತಿ, ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ,ಚಂದ್ರೇಶ್ , ಸದಸ್ಯರಾದ ಮಧುಸೂಧನ್ , ಕೆಂಚನಾಲ ಗ್ರಾಪಂ ಸದಸ್ಯರಾದ ಮಹಮ್ಮದ್ ಷರೀಫ್ ,ರಮೇಶ್ ಫ್ಯಾನ್ಸಿ, ಮುಖಂಡರಾದ ರವೀಂದ್ರ ಕೆರೆಹಳ್ಳಿ, ಶ್ರೀಧರ್ ,ಹಾಲಸ್ವಾಮಿ ಗೌಡ, ಹರ್ಷ ಮೊಬೈಲ್ ಹಾಗೂ ಇನ್ನಿತರರಿದ್ದರು.

Leave a Reply

Your email address will not be published. Required fields are marked *