ಚಿನ್ನಮನೆ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು
ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಚಿನ್ನಮನೆ ಗ್ರಾಮದ ಬಳಿಯಲ್ಲಿ ನಡೆದಿದೆ.
ರಿಪ್ಪನ್ಪೇಟೆ ಕಡೆಯಿಂದ ತೆರಳುತಿದ್ದ ಗಜಾನನ (ಚಕ್ರಾ) ಬಸ್ ಹಾಗೂ ಆಯನೂರು ಕಡೆಯಿಂದ ರಿಪ್ಪನ್ಪೇಟೆ ಕಡೆಗೆ ತೆರಳುತಿದ್ದ ಬೈಕ್ (KA 14 EG 6503) ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತಪಟ್ಟ ಬೈಕ್ ಸವಾರನ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.
ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಧಾವಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.