ripponpete | ವಡಗೆರೆಯ ಶ್ರೀ ತುಳಜಾಭವಾನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ
ರಿಪ್ಪನ್ಪೇಟೆ;-ಇಲ್ಲಿಗೆ ಸಮೀಪದ ವಡಗೆರೆ ಶ್ರೀ ತುಳುಜಾಭವಾನಿ ದೇವಸ್ಥಾನ ಸೇವಾ ಸಮಿತಿ ಇವರು ದೇವಸ್ಥಾನದ ಏಳನೇ ವರ್ಷದ ಶ್ರೀ ತುಳಜಾಭವಾನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಕಾರ್ಯಕ್ರಮವನ್ನು ಫೆಬ್ರವರಿ 20 ರಂದು ಮಂಗಳವಾರ ಅಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫಬ್ರವರಿ 20 ರಂದು ಮಂಗಳವಾರ ಬೆಳಗ್ಗೆ 8 ಗಂಟೆಗೆ ಶ್ರೀ ದೇವಿಗೆ ಕಲಾತತ್ವದಿವಾಸ ಹೋಮ ಶ್ರೀ ದುರ್ಗಾ ಹೋಮ ಕಲಶಾಭಿಷೇಕ ಮಹಾಪೂಜೆ ಮಹಾಮಂಗಳಾರತಿ ಪ್ರಸಾದ ವಿತರಣೆ ಹಾಗೂ ಸಾಮೂಹಿಕ ಅನ್ನಸಂತಪ್ಣೆ ಜರುಗಲಿದೆ.
ಸಂಜೆ 6 ಗಂಟೆಗೆ ಧಾರ್ಮಿಕ ಸಮಾರಂಭ ಅನಂದಪುರA ಮುರುಘಾಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿಯವರು ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡುವರು.
ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಶ್ರೀತುಳಜಾಭವಾನಿ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ವೈ.ಸುರೇಶ್ಸಿಂಗ್ ವಹಿಸುವರು.
ಇದೇ ದಿನ ರಾತ್ರಿ 8 ಗಂಟೆಗೆ ಶ್ರೀಕ್ಷೇತ್ರ ಅಲಸೆ ಶ್ರೀನಾಗೇಶ್ವರಿ ಶ್ರೀಸುಬ್ರಹ್ಮಣ್ಯ ಕೃಪಾಶ್ರಿತ ಯಕ್ಷಗಾನ ಮೆಳ ಇವರಿಂದ “ನಾಗಕಾರುಣ್ಯ’’ ಎಂಬ ಪೌರಾಣಿಕ ಕಾಲಮಿತ ಯಕ್ಷಗಾನ ಪ್ರದರ್ಶನ ಜರುಗಲಿದೆ ಎಂದು ದೇವಸ್ಥಾನ ಸೇವಾ ಸಮಿತಿಯ ಪ್ರಕಟಣೆ ತಿಳಿಸಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್