ANANDAPURA | ಹೆದ್ದಾರಿ ಮೇಲೆ ಆನೆಗಳ ಪುಂಡಾಟ – ಟ್ರಾಫಿಕ್ ಜಾಮ್
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರಂ ಸಮೀಪ ಕೋಣೆ ಹೊಸೂರು ಬಳಿ ಆನೆಗಳ ಹಿಂಡು ಹೊನ್ನಾವರ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 206 ಬಳಿ ಪ್ರತ್ಯಕ್ಷವಾಗಿದ್ದ ಪರಿಣಾಮ ಕೆಲ ಹೊತ್ತು ಟ್ರಾಫಿಕ್ ಜಾಮ್ ಆಗಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ಹೆದ್ದಾರಿ ಮೇಲೆ ಬಂದಿರುವ ಕಾಡಾನೆಗಳ ಹಿಂಡನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಹರಸಾಹಸ ಪಡಬೇಕಾಯಿತು, ಅಲ್ಲದೆ ಕಾಡಾನೆಗಳನ್ನು ಕಾಡಿಗೆ ಅಟ್ಟಲು ಹೆದ್ದಾರಿಯಲ್ಲಿ ಸಾಗುವ ವಾಹನಗಳನ್ನು ತಡೆಹಿಡಿಯಲಾಯಿತು ಇದರಿಂದ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಪರದಾಡುವಂತಾಯಿತು ಸದ್ಯ ಇದೀಗ ಸುಗಮ ಸಂಚಾರ ಶುರುವಾಗಿದೆ.