Shiralakoppa | ಸಂತೆಯಲ್ಲಿ ನಿಗೂಢ ವಸ್ತು ಸ್ಫೋಟ ಪ್ರಕರಣ – ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಹೇಳಿದ್ದೇನು..!!??
ಶಿವಮೊಗ್ಗ : ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ಸಿಡಿಮದ್ದು ಸ್ಫೋಟಗೊಂಡು ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ.
ಶಿರಾಳಕೊಪ್ಪದ ಬಸ್ ಸ್ಟ್ಯಾಂಡ್ ಬಳಿ ಈ ಘಟನೆ ನಡೆದಿದೆ. ಸಿಡಿಮದ್ದು ತಂದಿದ್ದ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಘಟನೆಯ ಬಗ್ಗೆ ಎಸ್ ಪಿ ಹೇಳಿದ್ದೇನು..??
ಇಂದು ಸಂತೆಗೆ ಉಮೇಶ್ ಮತ್ತು ಅವನ ಹೆಂಡತಿ ರೂಪರವರು ರಸ್ತೆ ಬದಿಯ ಅಂಗಡಿಯಾತ ಅಂತೋನಿ ಜೊತೆ ಕಂಬಳಿ ಖರೀದಿಸಿದ್ದಾರೆ. ಆ ಅವರೆಲ್ಲರೂ ಪರಸ್ಪರ ಪರಿಚಿತರು. ನಂತರ ಮಹಿಳೆ ರೂಪ ಮತ್ತು ಅವಳು ಪತಿ ಉಮೇಶ್ ಅಂಗಡಿಯವರಿಗೆ ಹೇಳಿ ಅರ್ಧ ಗಂಟೆ ಇಲ್ಲಿ ನಮ್ಮ ಬ್ಯಾಗ್ ಇಟ್ಟು ಸಂತೆಗೆ ಹೋಗಿ ವಾಪಸ್ ಬರುತ್ತೇನೆ ಎಂದಿದ್ದಾರೆ.
ಈ ಘಟನೆ ನಡೆದು ಸ್ವಲ್ಪ ಹೊತ್ತಿನ ನಂತರ ಆ ಬ್ಯಾಗ್ ಸ್ಫೋಟ ಗೊಂಡಿದೆ. ಪ್ರಾಥಮಿಕ ವಿಚಾರಣೆ ವೇಳೆ ಬ್ಯಾಗ್ನಲ್ಲಿ ಅವರು ಇಟ್ಟಿದ್ದ ಸಿಡಿ ಮದ್ದು ಪತ್ತೆಯಾಗಿದೆ. ಸದ್ಯ ಈ ಪ್ರಕರಣದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ
ಇನ್ನೂ ಸ್ಫೋಟಕ್ಕೆ ಸಂಬಂಧಿಸಿದಂತೆ ಯಾವುದೇ ಸ್ಟೌವ್ಗೂ ಸಂಬಂಧವಿಲ್ಲ. ಅಂಗಡಿಯಾತ ವ್ಯಾಪಾರಕ್ಕಾಗಿ ಸ್ಟೌವ್ ಇಟ್ಟುಕೊಂಡಿದ್ದ ಅಷ್ಟೆ ಅದಕ್ಕೂ ಘಟನೆಗೂ ಸಂಬಂಧವಿಲ್ಲ. ಕಾಡುಹಂದಿ ಶಿಕಾರಿಗೆ ಬಳಸುವ ಸಿಡಿಮದ್ದಿನಿಂದ ಬ್ಲಾಸ್ಟ್ ಆಗಿದೆ ಎಂದು ತಿಳಿಸಿದ್ದಾರೆ.
ಸೂಕ್ಷ್ಮ ಪ್ರಕರಣಗಳಲ್ಲಿ ಸುಳ್ಳುಸುದ್ದಿ ಹರಡಿದರೆ ಕೇಸ್ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್