POSTMAN NEWS

ನೈಜ ಸುದ್ದಿ ನೇರ ಬಿತ್ತರ..

RIPPONPETE | ಹುಲ್ಲು ಸಾಗಿಸುತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಭಸ್ಮ

GridArt 20250127 171629188.jpg

RIPPONPETE | ಹುಲ್ಲು ಸಾಗಿಸುತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಭಸ್ಮ

ಹುಲ್ಲು ತುಂಬಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಘಟನೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಕಣಬಂದೂರು ಗ್ರಾಮದಲ್ಲಿ ನಡೆದಿದೆ.

ವೀಡಿಯೋ ಇಲ್ಲಿ ವೀಕ್ಷಿಸಿ👆

ಕಣಬಂದೂರಿನ ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪದಲ್ಲಿ ಒಣ ಹುಲ್ಲಿನ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಲಾರಿ ಹೊತ್ತಿ ಉರಿದಿದೆ. ಸ್ಥಳೀಯರು , ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಅಯನೂರು ಮೂಲದ ವ್ಯಕ್ತಿಯೊಬ್ಬ ಕಣಬಂದೂರು , ಕರಡಿಗ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಒಣ ಹುಲ್ಲನ್ನು ಖರೀದಿಸಿ ಕೊಂಡೊಯ್ಯುತಿದ್ದಾಗ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣಾರ್ಧದಲ್ಲಿ ಬೆಂಕಿ ಜ್ವಾಲೆ ಎಲ್ಲಾ ಕಡೆ ಹಬ್ಬಿಕೊಂಡಿದೆ.

ವಿಷಯ ತಿಳಿಯುತಿದ್ದಂತೆ ತಕ್ಷಣ ಸ್ಥಳಕ್ಕಾಗಮಿಸಿದ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳು ಸ್ಥಳೀಯರೊಂದಿಗೆ ಸೇರಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ ಆ ನಂತರ ಹೊಸನಗರ ಅಗ್ನಿಶಾಮಕದಳ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಆದರೆ ಲಾರಿ ಹಾಗೂ ಹುಲ್ಲು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.