w
Headlines
Home » Ripponpete | ಬೈಕ್ ಹಾಗೂ ಕಾರಿನ ನಡುವೆ ಅಪಘಾತ – ಬೈಕ್ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ಜಖಂ..!!

Ripponpete | ಬೈಕ್ ಹಾಗೂ ಕಾರಿನ ನಡುವೆ ಅಪಘಾತ – ಬೈಕ್ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ಜಖಂ..!!

Ripponpete | ಬೈಕ್ ಹಾಗೂ ಕಾರಿನ ನಡುವೆ ಅಪಘಾತ – ಬೈಕ್ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ಜಖಂ..!!

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರಿನಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ನಡೆದಿದೆ.


ಕೋಡೂರು ಮೂಲದವರ ಕಿಯಾ ಕಾರು ಹಾಗೂ ಹೀರೋ ಹೋಂಡ ಡಿಲಕ್ಸ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಘಟನೆಯಲ್ಲಿ ಯಾರಿಗೂ ಗಂಭೀರ ಗಾಯವಾಗಿರುವುದಿಲ್ಲ…

ಬೈಕ್ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ಕಿಯಾ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು ಬೈಕ್ ಗೆ ಅಲ್ಪ ಸ್ವಲ್ಪ ಹಾನಿಯಾಗಿದೆ…


ಅಪಘಾತದಲ್ಲಿ ಸಣ್ಣ ವಾಹನಗಳು ಜಖಂ ಆಗುವುದು‌ ಮಾಮೂಲು ಆದರೆ ಈ ಘಟನೆಯಲ್ಲಿ‌ ಬೈಕ್ ಗೆ ಏನೂ ಹೆಚ್ಚು ಹಾನಿಯಾಗದೇ ಲಕ್ಷಾಂತರ ರೂ ಮೌಲ್ಯದ ಕಿಯಾ ಕಾರಿನ ಮುಂಭಾಗ ನಜ್ಜುಗುಜ್ಜಾಗಿರುವುದು ವಿಶೇಷವಾಗಿದೆ ಎಂದು ಸ್ಥಳೀಯರು ಮಾತನಾಡಿಕೊಳ್ಳುತಿದ್ದಾರೆ..

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.