ಶಾಸಕ ಬೇಳೂರು ಗೋಪಾಲಕೃಷ್ಣ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ -ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್
ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ರವರ ವೈಯಕ್ತಿಕ ಜೀವನದ ಬಗ್ಗೆ ಮಾತನಾಡುವ ಮುನ್ನ ಬಿಜೆಪಿ ಪಕ್ಷದ ಮುಖಂಡರು ಎಚ್ಚರಿಕೆಯಿಂದರಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ ಹೇಳಿದರು.
ಹೊಸನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಸಾಗರದ ಶಾಸಕರು ಮೋಜು-ಮಸ್ತಿಗೆ ವಿದೇಶಕ್ಕೆ ಹೋಗುತ್ತಾರೆಂದು ಸುಖಾಸುಮ್ಮನೆ ಆರೋಪಿಸುವ ಬಿಜೆಪಿಯವರು ತುಚ್ಚ ಹೇಳಿಕೆ ನೀಡಿ ತಮ್ಮದೇ ಗೌರವ ಕಳೆದುಕೊಳ್ಳಬಾರದು, ಶಾಸಕರು ವಿದೇಶಕ್ಕೆ ಹೋಗಿರುವುದು ತಮ್ಮ ಕೌಟುಂಬಿಕ ಕಾರಣಗಳಿಗಾಗಿಯೇ ಹೊರತು ಮೋಜು ಮಸ್ತಿಗಲ್ಲ ಎಂದರು.
ಶಾಸಕರ ಆಪ್ತ ಸಹಾಯಕ ಸಣ್ಣಕ್ಕಿ ಮಂಜು , ಕಾಂಗ್ರೇಸ್ ಪಕ್ಷದ ಪ್ರಮಖ ಕಾರ್ಯಕರ್ತರಿಗೆ ಮತ್ತು ತಾಲ್ಲೂಕು ಕಚೇರಿ ಆಡಳಿತಾಧಿಕಾರಿಗಳಿಗೆ ಮತ್ತು ತಾಲ್ಲೂಕು ಪಂಚಾಯಿತಿ ಇಓ ಮತ್ತು ಸಾಗರ ನಗರಸಭೆಯ ಕಮೀಷನರ್’ರವರಿಗೆ ಮಳೆಹಾನಿಯ ಬಗ್ಗೆ ಸಂಪೂರ್ಣ ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ, ಅದರಂತೆ ಪಕ್ಷದ ಕಾರ್ಯಕರ್ತರು ಸಹ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಜನತೆಗೆ ಸಾಂತ್ವನ ಹೇಳಿ ಶಾಸಕರು ಹೇಳಿದಂತೆ ವೈಯಕ್ತಿಕವಾಗಿ ಧನಸಹಾಯ ಮಾಡಲಾಗುತ್ತಿದೆ.
ಈ ತರಹದ ಹಗುರವಾದ ಹೇಳಿಕೆಗಳನ್ನು ಬಿಜೆಪಿ ನೀಡುವುದನ್ನು ನಿಲ್ಲಿಸದಿದ್ದರೆ ಬಿಜೆಪಿ ವಿರುದ್ದ ಕಾಂಗ್ರೆಸ್ ಪಕ್ಷದಿಂದ ಕ್ಷೇತ್ರದಾದ್ಯಂತ ಹೋರಾಟ ಹಮ್ಮಿಕೊಳ್ಲಾಬೇಕಾಗುತ್ತದೆ ಎಂದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್