ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (09/02/2025) ವಿದ್ಯುತ್ ವ್ಯತ್ಯಯ
ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 09/02/25 ರಂದು ಬೆಳಿಗ್ಗೆ 08-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.
ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ ನಾಳೆ ಬೆಳಿಗ್ಗೆ 08-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ???
ರಿಪ್ಪನ್ ಪೇಟೆ,ಹೆದ್ದಾರಿಪುರ,ಮೂಗೂಡ್ತಿ , ಬಿದರಹಳ್ಳಿ , ಹಾಗೂ ಜಂಬಳ್ಳಿಯಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.



